ವಿದ್ಯಾರ್ಥಿನಿಯ ಅತ್ಯಾಚಾರ, ವೀಡಿಯೊ ಹರಿಬಿಟ್ಟ ಪ್ರಕರಣ: ಏಳು ಮಂದಿಯ ಬಂಧನ

ವಿದ್ಯಾರ್ಥಿನಿಯ ಅತ್ಯಾಚಾರ, ವೀಡಿಯೊ ಹರಿಬಿಟ್ಟ ಪ್ರಕರಣ: ಏಳು ಮಂದಿಯ ಬಂಧನ

ಬಜ್ಪೆ: ಸಾಮಾಜಿಕ ಜಾಲತಾಣ Instagram ನಲ್ಲಿ ಪರಿಚಯ ಮಾಡಿಕೊಂಡ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾರ್ತಿಕ್, ರಾಕೇಶ್ ಸಲ್ಡಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯ ಕಾಲೇಜೊಂದರಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಎರಡು ತಿಂಗಳ ಹಿಂದೆ Instagram ನಲ್ಲಿ ಕಾರ್ತಿಕ್ ಎಂಬಾತ ಪರಿಚಯವಾಗಿದ್ದ. Instagramನಲ್ಲಿ ಮಾತನಾಡುತ್ತಿದ್ದ ಪರಿಚಯ ಪ್ರೀತಿಗೆ ತಿರುಗಿತ್ತು. 2025ರ ಜೂನ್ ತಿಂಗಳ ಕೊನೆಯ ಶನಿವಾರ ಮಧ್ಯಾಹ್ನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರ್ತಿಕ್ ತನ್ನ ಸ್ಕೂಟರ್ ನಲ್ಲಿ ವಳಚ್ವಿಲ್ ಹೋಟೇಲ್ ಗೆ ಕರೆದೊಯ್ದು ಅಲ್ಲಿ ಊಟ ಮಾಡಿ ಬಳಿಕ ಅಡ್ಯಾರ್ ಫಾಲ್ಸ್ ಬಳಿಯಿರುವ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಲ್ಲದೆ, ಇದೇ ವೇಳೆ ಕಾರ್ತಿಕ್ ನ ಸ್ನೇಹಿತ ರಾಕೇಶ್ ಸಲ್ಡಾನ ಕೂಡಾ ಅತ್ಯಾಚಾರ ಎಸಗಿದ್ದ. ರಾಕೇಶ್ ಸಲ್ಡಾನ ಅತ್ಯಾಚಾರ ಎಸಗುತ್ತಿದ್ದ ವೇಳೆ ಕಾರ್ತಿಕ್ ಅದನ್ನು ವೀಡಿಯೊ ಮಾಡಿಕೊಂಡು ಆತನ ಸ್ನೇಹಿತರಿಗೆ ಕಳುಹಿಸಿದ್ದ ಎಂದು ಬಾಲಕಿ ಆ.16ರಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ಬಾಲಕಿಯ ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸರು ಪೋಕ್ಸೊ ಕಾಲಂನಡಿ ಪ್ರಕರಣ ದಾಖಲಿಸಿಕೊಂಡು ಅತ್ಯಾಚಾರಗೈದಿರುವ ಆರೋಪಿಗಳಾದ ಕಾರ್ತಿಕ್ ಮತ್ತು ರಾಕೇಶ್ ಸಲ್ಡಾನ, ವೀಡಿಯೊ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಎಂಬವರನ್ನು ಬಂಧಿಸಿದ್ದು, ಅಪ್ರಾಪ್ತ ಬಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿ ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲನನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article