ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಧ್ಯವಯಸ್ಕನೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ನೆರೆಮನೆ ವಾಸಿ ಅಬೂಬಕ್ಕರ್ (50) ಬಂಧಿತ ಆರೋಪಿಯಾಗಿದ್ದಾನೆ.

ಮಾರ್ಚ್ 29 ರಂದು ಸಂಜೆ 5 ಗಂಟೆ ವೇಳೆಗೆ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಆಕೆಯನ್ನು ವಾಸ್ತವ್ಯ ಇಲ್ಲದ ಮನೆಯ ಹಿಂಬಾಗಿಲಿನಲ್ಲಿರುವ ಸಿಟೌಟಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ ಆರೊಪಿಯನ್ನು ದಸ್ತಗಿರಿ ಮಾಡಿದ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎಂಬ ದೂರು ದಾಖಲಾಗಿದ್ದು, ಈ ಬಗ್ಗೆಯೂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article