
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಢಿಕ್ಕಿ: ಚಾಲಕ ಸಹಿತ ಇಬ್ಬರು ಪ್ರಯಾಣಿಕರಿಗೆ ಗಾಯ
Saturday, September 20, 2025
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ, ಚಾಲಕಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಾರು ಚಾಲಕ ಕಾವಳ ಮೂಡೂರು ಗ್ರಾಮದ ಮಾದಡ್ಕ ನಿವಾಸಿ ಧನುಷ್ ಹಾಗೂ ಪರಾರ್ದೋಟ್ಟು ನಿವಾಸಿ ದೀಕ್ಷಿತ್ ಗಾಯಗೊಂಡವರಾಗಿದ್ದಾರೆ.
ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸರಕಾರಿ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಬಸ್‌ನ ಮುಂಭಾಗದ ಗಾಜು ಡಿಕ್ಕಿಯ ರಭಸಕ್ಕೆ ಸಂಪೂರ್ಣ ಹುಡಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.