
ಕೆಎಸ್‌ಆರ್‌ಟಿಸಿ ಬಸ್-ಬೈಕ್‌ಗೆ ಢಿಕ್ಕಿ: ಸವಾರ ಮೃತ್ಯು
Friday, September 19, 2025
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಕಟ್ಟೆ ಸಮೀಪದ ಎನ್.ಸಿ. ರೋಡ್ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿಯತ್ತ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ರಾಜೇಶ್‌ನನ್ನು ಆಸ್ಪತ್ರೆಗೆ ಅಂಬ್ಯುಲೆನ್ಸ್ ವಾಹನದ ಮೂಲಕ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.