ಹಿ.ಜಾ.ವೇ. ಮುಖಂಡನ ವಿರುದ್ಧ ಕೇಸು
Saturday, September 6, 2025
ಬಂಟ್ವಾಳ: ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಗೆಡವಲು ಯತ್ನಿಸಿದ ಆರೋಪದ ಮೇಲೆ ಹಿಂದೂ ಜಾಗರಣೆ ವೇದಿಕೆ ಜಿಲ್ಲಾ ಮುಖಂಡ ನರಸಿಂಹ ಶೆಟ್ಟಿ ಮಾಣಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಕುರಿತು ನರಸಿಂಹ ಶೆಟ್ಟಿ ಮಾಣಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಮತ್ತು ಸುಳ್ಳು ಮಾಹಿತಿಗಳನ್ನು ಒಳಗೊಂಡ ವಿಡಿಯೋವನ್ನು ಪ್ರಸಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಇದರಿಂದ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ ಉಂಟಾಗುವ ಸಾಧ್ಯತೆಗಳಿವೆ ಎಂದು ತಿಳಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.