ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ಅಜಾನ್: ಕೇಸು ದಾಖಲು
Sunday, September 7, 2025
ಬಂಟ್ವಾಳ: ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ಅಜಾನ್ ಕೂಗಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಕುರಿತ ದೂರಿನ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡವೊಂದರಲ್ಲಿ ಇತ್ತೀಚಿಗೆ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೆ ಧ್ವನಿವರ್ಧಕ ಅಳವಡಿಸಿಕೊಂಡು ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ ಅಜಾನ್ ಕೂಗುವುದರಿಂದ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಧ್ವನಿವರ್ಧಕಗಳ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಲಾಗಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರನಲ್ಲಿ ತಿಳಿಸಲಾಗಿದೆ. ದೂರನ್ನು ಸ್ವೀಕರಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.