ಅಕ್ರಮ ಗೋವಧಾ ಕೇಂದ್ರಕ್ಕೆ ದಾಳಿ: ಓರ್ವನ ಬಂಧನ
Monday, September 22, 2025
ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮದ ಕೆರೆ ಬಳಿ ನಡೆಯುತ್ತಿದ್ದ ಅಕ್ರಮ ಗೋವಧಾ ಕೇಂದ್ರಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 9 ದನಗಳನ್ನು ರಕ್ಷಿಸಿ ಗೋಶಾಲೆಗೆ ಹಸ್ತಾಂತರಿಸಿರುವ ಘಟನೆ ನಡೆದಿದೆ.
ದಾಳಿಯ ವೇಳೆ ಗೋವಧೆ ನಡೆಸಿ ಮಾಂಸ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದರೆ, ಇನ್ನು ಕೆಲ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದು ಬಂದಿದೆ.
ದಂಧೆಗೆ ಬಳಸಲಾಗುತ್ತಿದ್ದ ರಿಕ್ಷಾವೊಂದರ ಸಹಿತ ಸೊತ್ತಿಗಳನ್ನು ಪೊಲೀಸರು ವಶಪಡಿಸಿದ್ದಾರೆ.
ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್, ರಶೊಇದ್ ಮತ್ತಿತರರು ಪರಾರಿಯಾಗಿದ್ದು, ಮುಲ್ಕಿಯ ಕಾರ್ನಾಡು ನಿವಾಸಿ ತೌಸೀಫ ಎಂಬಾತನನ್ನು ಬಂಧಿತ ಆರೋಪಿಯಾಗಿದ್ದಾನೆ.
ಬಂಟ್ವಾಳ ನಾಸಿರ್ ಯಾನೆ ಹುಸೇನಬ್ಬ, ರಶೀದ್ ಮತ್ತು ಇತರರು ಪರಾರಿಯಾಗಿದ್ದು, ಖಚಿತ ಮಾಹಿತಿಯನ್ವಯ ಈ ದಾಳಿ ಕಾರ್ಯಾಚರಣೆ ನಡೆಸಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.