ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ

ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ


ಬೆಳ್ತಂಗಡಿ: ಬಿಜೆಪಿ, ಜೆಡಿಎಸ್ ಬಳಿಕ ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ನೇತೃತ್ವದ ಧರ್ಮರಕ್ಷಾ ಜಾಥಾ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದೆ. 

ಸುಮಾರು 250ಕ್ಕೂ ಹೆಚ್ಚು ಕಾರುಗಳಲ್ಲಿ ಮತ್ತು 5 ಟಿಟಿ ವಾಹನಗಳಲ್ಲಿ ರಾಷ್ಟ್ರಭಕ್ತರು ಶ್ರೀ ಕ್ಷೇತ್ರಕ್ಕೆ ಮಂಗಳವಾರ ಸಂಜೆ ತಲುಪಿತು. ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಇನ್ನು ಜಾಥದ ಜೊತೆಗೆ ತುಂಗಾ-ಗಂಗಾ-ನೇತ್ರಾವತಿಯ ಪವಿತ್ರ ನದಿಯಿಂದ  ನೀರನ್ನು ತರಲಾಗಿದ್ದು, ಧರ್ಮಸ್ಥಳದಲ್ಲಿ ಮೂರು ನದಿಯ ನೀರು ಪ್ರೋಕ್ಷಣೆ ಮಾಡಲಾಗಿದೆ. ಜಾಥ ತಲುಪಿದ ಬಳಿಕ ಮಾತನಾಡಿದ ಕೆ.ಎಸ್ ಈಶ್ವರಪ್ಪ , ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ. ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ. 

ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ. ಅಂದೇ ಇವರೆನ್ನೆಲ್ಲಾ ಅರೆಸ್ಟ್ ಮಾಡಿ ಒದ್ದು ಒಳಗೆ ಹಾಕಿದಿದ್ರೆ ಈ ಮಟ್ಟಿಗೆ ಈ ವಿಚಾರ ಬೆಳೆಯುತ್ತಿರಲಿಲ್ಲ. ಈಗ ಅವರ ಬಾಯಲ್ಲೇ ಎಲ್ಲಾ ಸತ್ಯ ಹೊರಬರುತ್ತಿದೆ. ಸರ್ಕಾರ ಇವರನ್ನ ಇಲ್ಲಿವರೆಗೆ ಬಿಟ್ಟದ್ದೇ ತಪ್ಪು. ವಿದೇಶಿ ಹಣ ಬಂದಿದೆ, ರಾಷ್ಟ್ರದ್ರೋಹಿಗಳು ಇದರಲ್ಲಿ ಕೈ ಜೋಡಿಸಿದ್ದಾರೆ. ಎಸ್.ಐ.ಟಿ.ಯಿಂದ ಸಾಕಷ್ಟು ಮಾಹಿತಿ ಹೊರಬಂದಿದೆ, ಅವರಿಗೆ ಧನ್ಯವಾದ ಎಂದರು. 18 ಅಡಿ ಗುಂಡಿ ತೆಗೆದು ಹೆಣ ಹೂಳಲು ಸಾಧ್ಯವೇ.ಪ್ರಕರಣವನ್ನ ಎನ್.ಐ.ಎ.ಗೆ ಕೊಡಬೇಕು. ಹಿಂದೂ ಧರ್ಮ ಉಳಿಯಬೇಕು, ಹಿಂದೂ ಧರ್ಮ ಉಳಿಯಲು ಪ್ರಾಣ ಕೊಡಲು ನಾವು ಸಿದ್ಧ ಎಂದರು.  

ಈ ಪ್ರಕರಣದ ಹಿಂದೆ ಇರುವ ಸಮೀರನಿಗೆ ಎಸ್ ಡಿ ಪಿಐ ಬೆಂಬಲ ಇದೆ. ವಕೀಲರುಗಳಿಗೆ ಹಣ ಎಲ್ಲಿಂದ ಸಿಗುತ್ತಿದೆ. ವಿದೇಶದ ಕಾಣದ ಕೈಗಳು ಕೆಲಸ ಮಾಡುತ್ತಿದೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article