ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ
Saturday, September 6, 2025
ಧರ್ಮಸ್ಥಳ: ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ನಂತರ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ, ದಶಕಗಳಿಂದ ದೇವಾಲಯದ ಸೇವೆ ಮತ್ತು ಅದರ ಪರಂಪರೆಯನ್ನು ಕಾಪಾಡಿಕೊಂಡು ಬಂದಿರುವ ಹೆಗ್ಗಡೆಯವರ ಕಾರ್ಯವನ್ನು ಶ್ಲಾಘಿಸಿದರು.
ಜಾತಿ-ಮತ ಭೇದವಿಲ್ಲದೆ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಪವಿತ್ರ ಕ್ಷೇತ್ರದ ಗೌರವ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.






