ಧರ್ಮಸ್ಥಳ: ಅಪಪ್ರಚಾರ ಖಂಡಿಸಿ, ಕೈ ಶಾಸಕ, ಮಾಜಿ ಸಂಸದರಿಂದ ಧರ್ಮಸ್ಥಳ ಯಾತ್ರೆ

ಧರ್ಮಸ್ಥಳ: ಅಪಪ್ರಚಾರ ಖಂಡಿಸಿ, ಕೈ ಶಾಸಕ, ಮಾಜಿ ಸಂಸದರಿಂದ ಧರ್ಮಸ್ಥಳ ಯಾತ್ರೆ


ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ ಖಂಡಿಸಿ ಹಾಗೂ ಧರ್ಮಸ್ಥಳದ ಪಾವಿತ್ರ್ಯವನ್ನು ಉಳಿಸುವ, ಧರ್ಮಾಧಿಕಾರಿಗಳಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಶನಿವಾರ ಕುಣಿಗಲ್ ತಾಲೂಕಿನ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಹಾಗೂ ಮಂಡ್ಯದ ಮಾಜಿ ಕಾಂಗ್ರೆಸ್ ಸಂಸದ ಎಲ್.ಆರ್. ಶಿವರಾಮೇಗೌಡ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಹಮ್ಮಿಕೊಂಡರು. ಕಾರ್ ರ‍್ಯಾಲಿಯಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಂದಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದರು.


ಕಾಂಗ್ರೆಸ್ ಪಕ್ಷದ ಶಾಸಕರು ಪ್ರಮುಖ ಮುಖಂಡರು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ, ಬೃಹತ್ ರ‍್ಯಾಲಿಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಧರ್ಮಸ್ಥಳದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.


300ಕ್ಕೂ ಹೆಚ್ಚು ಕಾರುಗಳಲ್ಲಿ ಯಾತ್ರೆ:

ಕುಣಿಗಲ್ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಸುಮಾರು 300ಕ್ಕೂ ಹೆಚ್ಚು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ಮಾಡಿದ್ದಾರೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article