ಕಾರ್ಕಳದ ಎಸ್‌ವಿಟಿ ವನಿತಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
Saturday, September 27, 2025
ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ (ಆಡಳಿತ) ಉಡುಪಿ ಜಿಲ್ಲೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26 ರಲ್ಲಿ ಕಾರ್ಕಳದ ಎಸ್‌ವಿಟಿ ವನಿತಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ 9ನೇ ತರಗತಿಯ ಧನ್ಯಶ್ರೀ ಹಾಗೂ 10ನೇ ತರಗತಿಯ ಸೌಮ್ಯಾ ಮತ್ತು ವಾಣಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಿರಿಯ ಸಹ ಶಿಕ್ಷಕರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.