ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಾಗ್ರಹ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಾಗ್ರಹ ಸಭೆ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರತ್ಯೆಗೆ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ ಸೆ.10 ರಂದು ಬೆಳಗ್ಗೆ 10 ಗಂಟೆಗೆ ಕುಕ್ಕುಂದೂರು ಗ್ರಾಮ ಪಂಚಾಯತ್ ಎದುರಿನ ಮೈದಾನದಲ್ಲಿ ಜನಾಗ್ರಹ ಸಭೆ ನಡೆಯಲಿದೆ.

ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಹಾಗೂ ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೈಲೂರು ಶ್ರೀ ರಾಮಕೃಷ್ಣ ಆಶ್ರಮದ ಆಧ್ಯಾತ್ಮಿಕ ಮಾರ್ಗದರ್ಶಕ ಸ್ವಾಮಿ ವಿನಾಯಕನಂದಜೀ ಮಹಾರಾಜ್ ದಿವ್ಯ ಉಪಸ್ಥಿತಿಯಲ್ಲಿರಲಿದ್ದಾರೆ.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉದ್ಯಮಿ ಬೋಳ ಪ್ರಭಾಕರ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಹಿಂದೂ ಐಕ್ಯ ವೇದಿಕೆ ಕೇರಳ ಇದರ ರವೀಶ್ ತಂತ್ರಿ ಕುಂಟಾರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಶಾಸಕ ವಿ. ಸುನಿಲ್ ಕುಮಾರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸದಸ್ಯ, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ್ ಕುಮಾರ್, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಉದ್ಯಮಿ ಗಣಪತಿ ಹೆಗ್ಡೆ, ಕಾರ್ಕಳ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀರಾಮ್ ಭಟ್ ಸಾಣೂರು, ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಸಾಣೂರು ರಾಜೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಪತ್ರಕರ್ತ ಜಿತೇಂದ್ರ ಕುಂದೇಶ್ವರ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ಸನಾತನ ಸಂಸ್ಥೆಯ ಅಶ್ವಿನಿ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಕಾರ್ಕಳ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್ ಪ್ರಭು, ಗೋವಾ ತುಳು ಕೂಟ ಅಧ್ಯಕ್ಷ ಗಣೇಶ್ ಶೆಟ್ಟಿ, ಅಡಪಾಡಿ ಪಳ್ಳಿ ಶ್ರೀ ಉಮಾಮಹೇಶ್ವರಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಪುಂಡಲೀಕ ನಾಯಕ್, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾರ್ಕಳ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ರಾಮಚಂದ್ರ ಆಚಾರ್, ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು, ಕಾರ್ಕಳ ಬಿಲ್ಲವ ಸಮಾಜ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಸಿರಿಯಣ್ಣ ಶೆಟ್ಟಿ, ಕಣಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಕ್ರಂ ಹೆಗ್ಡೆ, ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ನಂದ ಕುಮಾರ್ ಹೆಗ್ಡೆ, ಕರ್ನಾಟಕ ಗೋ ರಕ್ಷಕ್ ಪ್ರಮುಖ್ ಸುನಿಲ್ ಕೆ.ಆರ್., ಹಿಂದೂ ಜಾಗರಣಾ ವೇದಿಕೆ ಪ್ರಾಂತ್ಯ ಸದಸ್ಯ ಮಹೇಶ್ ಶೆಣೈ, ಕಾರ್ಕಳ ತಾ.ಪಂ. ಮಾಜಿ ಅಧ್ಯಕ್ಷ ಸುಂದರ್ ಬಿ., ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಗ್ಗಪ್ಪ ಪರವ ಕೆರ್ವಾಶೆ ಹಾಗೂ ಗೋವಿಂದ ಬಂಗೇರ ನೀರೆ, ಬಜಗೋಳಿ ಕೊಪ್ಪಲ ಶ್ರೀ ಆದಿಶಕ್ತಿ ದೇವಸ್ಥಾನದ ಧರ್ಮದರ್ಶಿ ಸುಧಾಕರ ಸಾಲ್ಯಾನ್, ಉದ್ಯಮಿ ಉದಯ್ ಸಾಲ್ಯಾನ್ ಬಜಗೋಳಿ, ಕಾರ್ಕಳ ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಹರಿಶ್ಚಂದ್ರ ಕುಲಾಲ್, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ್ ಗೌಡ, ದುರ್ಗಾ ಶ್ರೀ ಅಂಬಾಭವಾನಿ ದೇವಸ್ಥಾನದ ಮೊಕ್ತೇಸರ ಶಂಕರ ನಾಯ್ಕ್ ಗೌರವ ಉಪಸ್ಥಿತರಿರಲಿದ್ದಾರೆ. ಧಾರ್ಮಿಕ ಚಿಂತಕ ದಾಮೋದರ ಶರ್ಮ ಬಾರ್ಕೂರು ಕಾರ್ಯಕ್ರಮ ನಿರೂಪಿಸಲಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಹಾಗೂ ಉದಯ್ ಕುಮಾರ್ ಹೆಗ್ಡೆ ಯರ್ಲಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article