ಕುಂದಾಪುರ: ಸೆ.7 ರಂದು ಹುಣ್ಣಿಮೆಯಂದು ಚಂದ್ರಗ್ರಹಣದ ಕಾರಣದಿಂದ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ದೈನಂದಿನ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ಅಂದು ಹುಣ್ಣಿಮೆ ಸತ್ಯನಾರಾಯಣ ಪೂಜೆ, ರಂಗಪೂಜೆ, ವಿಶೇಷ ಸೇವಾದಿಗಳು ಮತ್ತು ಪ್ರಸಾದ ಭೋಜನ ವ್ಯವಸ್ಥೆ ಇರುವುದಿಲ್ಲ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.