.jpeg)
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಿದಾತನಿಗೆ 'ಬಂಧನ ಭಾಗ್ಯ'
Thursday, September 18, 2025
ಕುಂದಾಪುರ: ಬ್ರಹ್ಮಾವರ ತಾಲೂಕು ಕೋಟ ಸಮೀಪ ವ್ಯಕ್ತಿಯೋರ್ವ ರಿಕ್ಷಾದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ವಯ ಕೋಟ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿ ಸಾಗಿಸುತ್ತಿದ್ದಾತನನ್ನೂ ವಶಕ್ಕೆ ಪಡೆಯಲಾಗಿದೆ.
ಆರೋಪಿ ರಾಜೇಶ್ ಎಂದು ಗುರುತಿಸಲಾಗಿದೆ.
ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿಯ ಆದ್ಯತಾ ಪಡಿತರ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಸಿಗುವ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವುದು ದೃಢಪಡಿಸಿಕೊಂಡು ರಿಕ್ಷಾದಲ್ಲಿದ್ದ ಒಟ್ಟು 7 ಚೀಲದಲ್ಲಿ ಸಂಗ್ರಹಿಸಿದ್ದ 274.34 ಕೆ ಜಿ ಅಕ್ಕಿ ಸ್ವಾಧೀನಪಡಿಸಿಕೊಂಡಿದ್ದಾರೆ.