ಕುಂದಾಪುರ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಪರಿವಾರ ದೇವರಾದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ರಜತ ಪೀಠ ಸಮರ್ಪಣೆ
Sunday, September 28, 2025
ಕುಂದಾಪುರ: ಇಲ್ಲಿನ ದೈವಜ್ಞ ಬ್ರಾಹ್ಮಣ ಸಮಾಜದ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಪರಿವಾರ ದೇವರಾದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕುಂದಾಪುರದ ಶ್ರೀ ರಾಘವೇಂದ್ರ ಜ್ಯುವೆಲ್ಲರ್ಸ್ ಮಾಲಕರಾದ ವೆಂಕಟೇಶ್ ಶೇಟ್ ಮತ್ತು ನಾಗರತ್ನ ದಂಪತಿಗಳು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ರಜತ ಪೀಠ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜ ಬಾಂಧವರು, ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರರಾದ ಗೋಕುಲ್ ಶೇಟ್, ಮಹಿಳಾ ಮಂಡಳಿಯ ಅಧ್ಯಕ್ಷರು, ಅರ್ಚಕರಾದ ಶ್ರೀಪಾದ್ ಭಟ್, ಕಾರ್ತಿಕ್ ವಿ. ಶೇಟ್ ಉಪಸ್ಥಿತರಿದ್ದರು.
