ಸೆ.12 ರಂದು ಕಮ್ಯುನಿಟಿ ಯೂತ್ ಲೀಡರ್ಸ್ ಮೀಟ್
ಮಂಗಳೂರು: ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್ (ಯುಇಎ)ರಾಜ್ಯ ಸಮಿತಿ ವತಿಯಿಂದ ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ಸಲುವಾಗಿ ಸೆ.12ರಂದು ಕಮ್ಯುನಿಟಿ ಯೂತ್ ಲೀಡರ್ಸ್ ಮೀಟ್ ಆಯೋಜಿಸಲಾಗಿದೆ.
ಬುಧವಾರ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಯುಇಎಯ ಅಧ್ಯಕ್ಷ ಸಿರಾಜ್ ಎರ್ಮಾಳು, ಅಂದು ಸಂಜೆ 7.30ಕ್ಕೆ ಮಂಗಳೂರಿನ ಇಂಡಿಯಾನ ಕನ್ವೆನ್ಶನ್ ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಯುಇಎ ಕೀಡೆಗಳ ಮೂಲಕ ಸಮುದಾಯದ ಸಬಲೀಕರಣ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಸಂಸ್ಥೆಯಾಗಿದೆ. ಎಲ್ಲಾ ವಿವಿಧ ಕೀಡಾಪಟುಗಳನ್ನು ತಯಾರುಗೊಳಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಉತ್ತೇಜಿಸುವುದು ಇದರ ಉದ್ದೇಶವಾಗಿದೆ. ಭಾರತೀಯ ಸೊಸೈಟಿ ಕಾಯ್ದೆಯಡಿ ನೋಂದಾಯಿತವಾದ ಸಂಸ್ಥೆ ದ.ಕ., ಉಡುಪಿ, ಉ.ಕ. ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಈಗಾಗಲೇ ಸುಮಾರು 21 ವಲಯ ಸಮಿತಿ ರಚಿಸಿ 7000ಕ್ಕೂ ಅಽಕ ಸದಸ್ಯರೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದವರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಗೋಳ್ತಮಜಲು, ಕಾರ್ಯದರ್ಶಿ ರಮೀಝ್ ಹುಸೇನ್, ಕಾರ್ಯಕಾರಿ ಸಮಿತಿ ಸದಸ್ಯರಾದ ದಾವೂದ್, ಸಿದ್ದೀಕ್ ಉಳ್ಳಾಲ, ಮುಸ್ತಫ ಉಪಸ್ಥಿತರಿದ್ದರು.