ಸೆ.13ರಂದು ರಾಷ್ಟ್ರೀಯ ಲೋಕ ಅದಾಲತ್
ನ್ಯಾಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 90 ದಿನಗಳ ಮಧ್ಯಸ್ಥಿಕೆ ಅಭಿಯಾನ 2025 ಜುಲೈ 1ರಂದು ಆರಂಭಗೊಂಡಿದ್ದು, ಅಕ್ಟೋಬರ್ 7ರವರೆಗೆ ನಡೆಯಲಿದೆ. ಈ ಅಭಿಯಾನದ ಸಂದರ್ಭದಲ್ಲಿ ಮತ್ತು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾ ಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲ ಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣ ಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಸಂಧಾನದ ಮುಖಾಂತರ 1. ಮೋಟಾರು ವಾಹನ ಅಪಘಾತ ಪ್ರಕರಣಗಳು.2. ಚೆಕ್ಕು ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು. 3. ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು 4. ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು 5. ವಿಚ್ಛೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು 6. ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು 7. ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು 8. ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು 9. ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳ ಹಾಗೂ ಪಿಂಚಣಿ ಪ್ರಕರಣಗಳು 10.ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು.11. ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು ಒಳಗೊಳ್ಳುತ್ತವೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿ ಸೂಚಿಸಿದ್ದಲ್ಲಿನ್ಯಾಯಾಲಯಗಳಿಂದ ಸೂಚಿಸಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಕರೆಸಿಕೊಂಡು ದಕ್ಷಿಣ ಕನ್ನಡ ನ್ಯಾಯಾಲಯದ ಸಮುಚ್ಚ ಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಾರ್ವಜನಿಕರು ತಮ್ಮ ಪ್ರಕರಣಗಳು ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಗೌರವಾನ್ವಿತ ಉಚ್ಚನ್ಯಾಯಾಲಯ, ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.ಅದೇ ರೀತಿ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ದಿನಾಂಕ 21.08.2025 ರ ಆದೇಶದಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.
ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ್ ಅದಾಲತ್ ದಿನಾಂಕ 13.09.2025 ರಂದು ಸಂಬಂಧ ಆದೇಶಿಸಲಾಗಿದ್ದು, ಇದು ದಿನಾಂಕ 23.08.2025 ರಿಂದ ದಿನಾಂಕ 12.09.2025 ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಶೇ.50 ರಿಯಾಯಿತಿಯಲ್ಲಿ ದಂಡ ಪಾವತಿಸುವ ಮೂಲಕ ತಮ್ಮ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಇದೆ ಎಂದು ಈ ಮೂಲಕ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸ ಉಪಸ್ಥಿತರಿದ್ದರು.