
ಎಸ್‌ಸಿಡಿಸಿಸಿ ಬ್ಯಾಂಕಿಗೆ ಸೆ.20 ರಂದು ನಬಾರ್ಡ್ ಸಿಜಿಎಂ ಭೇಟಿ
Friday, September 19, 2025
ಮಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇದರ ಮುಖ್ಯ ಮಹಾಪ್ರಬಂಧಕರಾದ ಡಾ. ಸುರೇಂದ್ರ ಬಾಬು ಅವರು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡಲಿರುವರು.
ಬೆಳಗ್ಗೆ 11 ಗಂಟೆಗೆ ಬ್ಯಾಂಕಿಗೆ ಭೇಟಿ ನೀಡಲಿರುವರು ನಬಾರ್ಡ್ ಸಿಜಿಎಂ ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರೊಂದಿಗೆ ಬ್ಯಾಂಕಿನ ಪ್ರಗತಿಯ ಕುರಿತು ಸಮಾಲೋಚನೆ ನಡೆಸಲಿರುವರು.