
ಸೆ.20 ರಂದು ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಮಂಗಳೂರು ನಗರ ಪೊಲೀಸ್ ಇಲಾಖೆಗೆ ಎರಡು ಸ್ಕಾರ್ಪಿಯೋ ವಾಹನಗಳ ಹಸ್ತಾಂತರ
Friday, September 19, 2025
ಮಂಗಳೂರು: ಮಂಗಳೂರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದೀಗ ಮಂಗಳೂರು ನಗರ ಪೊಲೀಸ್ ಇಲಾಖೆಗೆ ಎರಡು ಸ್ಕಾರ್ಪಿಯೋ ವಾಹನವನ್ನು ನೀಡಲು ನಿರ್ಧರಿಸಿದೆ.
ಪೊಲೀಸ್ ಇಲಾಖೆಗೆ ನೀಡುವ ಎರಡು ಸ್ಕಾರ್ಪಿಯೋ ವಾಹನಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಸೆ.20 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಂಗಳೂರು ನಗರ ಪೊಲೀಸ್ ಇಲಾಖೆಗೆ ನೀಡುವ ಎರಡು ಸ್ಕಾರ್ಪಿಯೋ ವಾಹನಗಳನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಹಸ್ತಾಂತರಿಸಲಿರುವರು.