ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗುವ ಜಾತಿ ಜನಗಣತಿ ಮರು ಸಮೀಕ್ಷೆ ಬಗ್ಗೆ ಮಾಹಿತಿ ಪಡೆದ ಸಭಾಧ್ಯಕ್ಷ ಯು.ಟಿ. ಖಾದರ್
Tuesday, September 9, 2025
ಮಂಗಳೂರು: ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ದುಬೈ ಗೆ ತೆರಳಿ ಬೆಂಗಳೂರಿಗೆ ಹಿಂದಿರುಗಿದ ಸಭಾಧ್ಯಕ್ಷ ಯು.ಟಿ.ಖಾದರ್ ಸೆಪ್ಟೆಂಬರ್ 22 ರಿಂದ ಶುರು ಆಗಲಿರುವ ಜಾತಿ ಜನಗಣತಿ ಮರು ಸಮೀಕ್ಷೆಯ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೂ ಮಾಜಿ ಅಡ್ವಕೇಟ್ ಜನರಲ್ ಮಧುಸೂಧನ್.ಆರ್.ನಾಯಕ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಶ್ರೀಮತಿ ತುಳಸಿ ಮದ್ದಿನೇನಿ ರವರ ಜೊತೆ ಸಭೆ ನಡೆಸಿ ಚರ್ಚಿಸಿ ಮಾಹಿತಿ ಪಡೆದು ಕೊಂಡರು.
ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ಅಂದರೆ 15 ದಿನಗಳ ಕಾಲ,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಜಾತಿ ಗಣತಿ ಮರು ಸಮೀಕ್ಷೆ ನಡೆಸಲಿದ್ದು,ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆಯನ್ನು ನಡೆಸಲಾಗುವುದು.ಈ ಬಾರಿ ಸಾಮಾಜಿಕ-ಶೈಕ್ಷಣಿಕ-ಆರ್ಥಿಕ ಸಮೀಕ್ಷೆ(ಜಾತಿ ಗಣತಿ)ಯು ಸರ್ವರಿಗೂ ಸಮಬಾಳು,ಸಮಪಾಲು ನೀಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸ್ಥಳೀಯ ಸಂಘ ಸಂಸ್ಥೆಗಳು,ಧಾರ್ಮಿಕ ಮುಖಂಡರು,ಇನ್ನಿತರ ಸಾಮಾಜಿಕ ಶೈಕ್ಷಣಿಕ ಪರಿಣಿತರ ಸಲಹೆ ಸಹಕಾರ ಪಡೆದುಕೊಳ್ಳಬೇಕೆಂದು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದರು.