ಅರೋಮೇಜನ್ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 4 ಕೋಟಿ ನಷ್ಟ

ಅರೋಮೇಜನ್ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 4 ಕೋಟಿ ನಷ್ಟ


ಮಂಗಳೂರು: ನಗರಕ್ಕೆ  ಹೊರವಲಯದ ಬೈಕಂಪಾಡಿಯಲ್ಲಿರುವ ಅರೋಮೇಜನ್ ಸುಗಂಧ ದ್ರವ್ಯ ಕಾರ್ಖಾನೆಗೆ ಇಂದು ನಸುಕಿನಲ್ಲಿ ಬೆಂಕಿ ತಗುಲಿದ್ದು, ಅದರಲ್ಲಿ ದಾಸ್ತಾನು ಮಾಡಿದ್ದ ಸುಗಂಧ ದ್ರವ್ಯ ಹಾಗೂ ಅದನ್ನು ತಯಾರಿಸುವ ಸಾಮಗ್ರಿಗಳು ಸಂಪೂರ್ಣ ನಾಶವಾಗಿವೆ.

ಕಾರ್ಖಾನೆಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಎಂಸಿಎಫ್ ಸಿಬ್ಬಂದಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಕದ್ರಿಯ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ, ಎಂಸಿಎಫ್ ಹಾಗೂ ಎನ್‌ಎಂಪಿಎ ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದವು. ಸುಗಂಧ ದ್ರವ್ಯ ತಯಾರಿಸಲು ದಾಸ್ತಾನಿಸಿದ್ದ ಪದಾರ್ಥಗಳು ಭಾರಿ ಪ್ರಮಾಣದಲ್ಲಿ ಇದ್ದುದರಿಂದ ಬೆಂಕಿಯ ಜ್ವಾಲೆಗಳು ಆಕಾಶದೆತ್ತರಕ್ಕೆ ವ್ಯಾಪಿಸಿದ್ದವು. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಕಿ ಅವಘಡದಿಂದ ಸುಮಾರು 4 ಕೋಟಿ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article