
ಸೆ.6ರಂದು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ‘ಪ್ರತಿಭಾ ಪುರಸ್ಕಾರ ಕಾರ್ಯಕ್ರಮ’
2024-2025ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಈ ಸಮಾರಂಭದಲ್ಲಿ ನಡೆಯಲಿದೆ.
ಗೌರವ ಪುರಸ್ಕಾರ:
ಈ ಸಮಾರಂಭದಲ್ಲಿ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೈದ ಉಡುಪಿ ತಾಲೂಕಿನ ನೃತ್ಯ ವಿದುಷಿ ದೀಕ್ಷಾ ವಿ. ಹಾಗೂ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ರೆಮೋನಾ ಇವೆಟ್ ಪಿರೇರಾ ಇವರಿಗೆ ಬ್ಯಾಂಕ್ ವತಿಯಿಂದ ಗೌರವ ಪುರಸ್ಕಾರ ಸನ್ಮಾನ ನಡೆಯಲಿದೆ.
ಕರ್ನಾಟಕ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಗೌರವ ಪುರಸ್ಕಾರ ಹಾಗೂ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ಉತ್ತಮ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.