‘ಧರ್ಮಜಾಗೃತಿ ಯಾತ್ರೆ’ ಸೆ.8ರಂದು ಪೂರ್ವಭಾವಿ ಸಭೆ
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳನ್ನೊಳಗೊಂಡ ‘ಧರ್ಮಜಾಗೃತಿ ಯಾತ್ರೆ’ಯನ್ನು ಅಯೋಜಿಸಲಾಗಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ಸೆ.8ರಂದು ಸೋಮವಾರ ಮಧ್ಯಾಹ್ನ ಗಂಟೆ 2.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆಯಲಿದೆ.
ಧರ್ಮ ರಕ್ಷಣೆ ಹಾಗೂ ಧರ್ಮದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಧರ್ಮ ಜಾಗೃತಿ ಯಾತ್ರೆ ಯನ್ನು ಸಹಕಾರಿ ಬಂಧುಗಳೆಲ್ಲರೂ ಭಾಗವಹಿಸುವ ಮೂಲಕ ಆಯೋಜಿಸಲಾಗಿದ್ದು, ಹಾಗಾಗಿ ಸೋಮವಾರ ನಡೆಯುವ ಪೂರ್ವಭಾವಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.