ರಾಷ್ಟ್ರಮಟ್ಟದ ಭಾರತ್ ಸ್ಕೌಟ್ ಅಂಡ್ ಗೈಡ್ ಕಾರ್ಯಕ್ರಮ: ಸ್ಪೀಕರ್ ಭಾಗಿ

ರಾಷ್ಟ್ರಮಟ್ಟದ ಭಾರತ್ ಸ್ಕೌಟ್ ಅಂಡ್ ಗೈಡ್ ಕಾರ್ಯಕ್ರಮ: ಸ್ಪೀಕರ್ ಭಾಗಿ


ಮಂಗಳೂರು: ನವ ದೆಹಲಿಯಲ್ಲಿ ನಡೆದ ಭಾರತ್ ಸ್ಕೌಟ್ ಅಂಡ್ ಗೈಡ್ಸ್‌ನ ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದರು.

ಸ್ಪೀಕರ್ ಮಾತನಾಡಿ, ಉತ್ಸಾಹಿ, ಆತ್ಮವಿಶ್ವಾಸಿ ಮತ್ತು ದೃಢ ಮನಸ್ಸಿನ ಯುವ ಸಮಾವೇಶವನ್ನು ನೋಡಿ ನನಗೆ ಭವಿಷ್ಯದ ಭಾರತದ ಬಗ್ಗೆ ಅಪಾರ ಭರವಸೆ ಮತ್ತು ಹೆಮ್ಮೆ ಅನ್ನಿಸುತ್ತಿದೆ. ಏಕೆಂದರೆ, ನೀವು ಖಂಡಿತವಾಗಿಯೂ ವಿಶ್ವದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠ ಮತ್ತು ಪ್ರಗತಿಶೀಲ ರಾಷ್ಟ್ರವಾಗಿ ಮಾನ್ಯತೆ ಪಡೆಯಲಿರುವ ಶ್ರೇಷ್ಠ ಭಾರತದ ವಾಸ್ತುಶಿಲ್ಪಿಗಳಾಗಿದ್ದೀರಿ", ಎಂದರು. 


`ಸ್ಕೌಟಿಂಗ್ ಮತ್ತು ಗೈಡಿಂಗ್ ಸೇವೆ, ಸಂಸ್ಕಾರ ಮತ್ತು ಸಹಯೋಗ ಎನ್ನುವ ಮೂರು ಸುಂದರ ಸಂಗಮವಾಗಿದೆ. ಈ ಮೂರು ಸ್ತಂಭಗಳು ಸಮಗ್ರ ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರಬಲ ಚೌಕಟ್ಟಿನಂತೆ ಕಾರ್ಯನಿರ್ವಹಿಸುತ್ತವೆ. ಇದು ’ಸ್ವಯಂ’ ದಿಂದ ’ಇತರರ ಸೇವೆ’ಗೆ ಇರುವ ಒಂದು ಪರಿವರ್ತನಾಶೀಲ ಪಯಣವಾಗಿದೆ. ವಿದ್ಯಾರ್ಥಿಗಳನ್ನು ಅಧ್ಯಯನ ಕೊಠಡಿಯಾಚೆಗೆ ಕರೆದೊಯ್ಯುವ, ಅವರನ್ನು ಸಮಾಜದ ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತಿಸುವ ಪಯಣವಾಗಿದೆ. ಭಾರತದ ನಾರಿ ಶಕ್ತಿಯನ್ನು ಪ್ರತಿನಿಧಿಸುವ ನಮ್ಮಹೆಮ್ಮೆಯ ಯುವತಿಯರು ಕೂಡ ನಾಯಕತ್ವದಲ್ಲಿ ಮುನ್ನಡೆಯುವುದು, ಅನ್ವೇಷಣೆಗೆ, ಮತ್ತು ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಿರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ನೀವು ನಿಜವಾಗಿಯೂ ಲಕ್ಷಾಂತರ ಯುವತಿಯರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದೀರಿ", ಎಂದು ಹೇಳಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. 

ಕೇಂದ್ರ ಕಾರ್ಮಿಕ, ಉದ್ಯೋಗ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಮಾಜಿ ಮುಖ್ಯ ರಾಷ್ಟ್ರೀಯ ಆಯುಕ್ತ ಡಾ. ಕೆ.ಕೆ. ಖಂಡೇಲ್ವಾಲ್, ಛತ್ತೀಸಘಡದ ಮಾಜಿ ಮಾಜಿ ಸಚಿವ ಹಾಗೂ ಸಂಸದ ಬ್ರಿಜ್ ಮೋಹನ್ ಅಗರ್ವಾಲ್, ದೆಹಲಿ ಸಂಸದ ಮನೋಜ್ ತಿವಾರಿ, ಮಾಜಿ ನ್ಯಾಯಧೀಶರದ  ಜಾವೇರಿಯ ಹಾಗೂ  ಗೀತಾಂಜಲಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಹೆಚ್ಚುವರಿ ಸಹಾಯಕ ಆಯುಕ್ತ ಎಂ.ಎ ಖಾಲಿದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ರಾಷ್ಟೀಯ ಮಹಾಕಾರ್ಯಾಧ್ಯಕ್ಷ ಪಿ.ಜಿ. ಆರ್. ಸಿಂಧ್ಯಾ ಮುಂತಾದ ನಾಯಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article