ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೇರಳ ಕಡೆಗೆ ಸಂಚರಿಸುತ್ತಿದ್ದ ಕಟ್ಟಿಗೆ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ್ದು, ಸಂಚಾರ ಅಸ್ತವ್ಯಸ್ತವಾದ ಘಟನೆ ಇಂದು ಮಧ್ಯಾಹ್ನ ಎಕ್ಕೂರು ಪ್ರದೇಶದಲ್ಲಿ ನಡೆದಿದೆ.
ಈ ಸಂದರ್ಭದಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. ಪೊಲೀಸರು ಸ್ಥಳಕ್ಕೆ ದಾವಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.