ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ
Tuesday, September 30, 2025
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆಯಾಗಿದೆ.
ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿರುವ ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶರು ಅ.4 ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ.
ಸೆ.30ರ ಮಂಗಳವಾರ ಬೆಳಗ್ಗೆ ಮಹೇಶ್ ಶೆಟ್ಟಿ ಜಾಮೀನು ಅರ್ಜಿಗೆ ಸರಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು.
ಮಧ್ಯಾಹ್ನದ ಬಳಿಕ ತಿಮರೋಡಿ ಪರ ವಕೀಲರಿಂದ ನಿರೀಕ್ಷಣ ಜಾಮೀನು ನೀಡುವಂತೆ ವಾದ ಮಂಡನೆಯಾಗಿದ್ದು, ತಿಮರೋಡಿ ಪರ ವಕೀಲರ ವಾದದ ಬಳಿಕ, ಸರಕಾರದ ಪರ ವಕೀಲರು ವಾದ ಮಂಡನೆಗೆ ಸಮಯಾವಕಾಶ ಕೋರಿದ್ದು, ಅದರಂತೆ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಲಾಗಿದೆ.