ವಿ.ವಿ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ
Saturday, September 27, 2025
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಬಿಎ ವಿದ್ಯಾರ್ಥಿ ಕಾರ್ತಿಕ್ ಸಿ. ಆಚಾರ್ಯ, ಉಪಾಧ್ಯಕ್ಷರಾಗಿ ತೃತೀಯ ಬಿಎ ವಿದ್ಯಾರ್ಥಿ ಕೃಷ್ಣ ಆರ್., ಸಹಾಯಕ ಕಾರ್ಯದರ್ಶಿಯಾಗಿ ತೃತೀಯ ಬಿಬಿಎ ವಿದ್ಯಾರ್ಥಿನಿ ನಿಧಿ, ಲಲಿತಕಲಾ ಸಂಘದ ಕಾರ್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿನಿ ಸುಪ್ರೀತಾ ಬಿ., ಲಲಿತಕಲಾ ಸಂಘದ ಸಹಾಯಕ ಕಾರ್ಯದರ್ಶಿಯಾಗಿ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಶಿವಾನಿ ಕೆ. ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಪ್ರೊ. ರಾಮಕೃಷ್ಣ ಬಿ.ಎಂ., ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಪ್ರೊ. ಜಯವಂತ ನಾಯಕ್, ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಸೇರಿದಂತೆ ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.