ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿರುವ ಗುಂಡಿಗೆ ಬಿದ್ದು ಮಹಿಳೆ ಬಲಿ
Tuesday, September 9, 2025
ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿರುವ ಗುಂಡಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಮೃತ ಮಹಿಳೆಯನ್ನು ಮಾಧವಿ(44) ಎಂದು ಗುರುತಿಸಲಾಗಿದೆ.
ಸುರತ್ಕಲ್ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಸ್ಕೂಟರ್ ಸಮೇತ ಮಹಿಳೆ ಹೆದ್ದಾರಿಗೆ ಬಿದ್ದಿದ್ದಾರೆ ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಮೀನಿನ ಲಾರಿ ಮಹಿಳೆ ಮೇಲೆ ಹರಿದುಹೋಗಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.