ಸೇವಾ ಕಾರ್ಯಗಳಲ್ಲಿ ತೊಡಗಿಭಗವಂತನ ಕೃಪೆಗೆ ಪಾತ್ರರಾಗೋಣ: ಶ್ರೀ ಸ್ವಾಮಿ ಸುಹಿತಾನಂದಜಿ ಮಹಾರಾಜ್
ಅವರು ಇಂದು ಮಂಗಳೂರು ರಾಮಕೃಷ್ಣ ಮಿಷನ್ ಮಂಗಳೂರಿನಲ್ಲಿ 75 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮಂಗಳೂರು ರಾಮಕೃಷ್ಣ ಮಠದ ಆವರಣದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಲವಾರುಜನ ಸನ್ಯಾಸಿಗಳಾಗಿ ಅಥವಾ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವು ತಾನು, ಮನ ಧನ ಪೂರ್ವಕವಾಗಿಇನ್ನಷ್ಟು ಉತ್ತಮ ರೀತಿಯಲ್ಲಿ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳೋಣ ಈ ಮೂಲಕ ನಮ್ಮ ಜೀವನವನ್ನು ಪಾವನಗೊಳಿಸಿ ಭಗವಂತನ ಕೃಪೆಗೆ ಪಾತ್ರರಾಗೋಣ ಎಂದರು.
ಮುಖ್ಯ ಅತಿಥಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ಚೌಟ ಮಾತನಾಡಿ, ನಾನು ಇವತ್ತುಏನಾಗಿದ್ದರೂ ಶ್ರೀ ರಾಮಕೃಷ್ಣ ಪರಮಹಂಸರದಯೆಯಿಂದ ಹಾಗೂ ಸ್ವಾಮೀಜಿಗಳ ಆಶೀರ್ವಾದದಿಂದ ಎಂದು ಹೇಳಲು ಖುಷಿಯಾಗುತ್ತಿದೆ. ಪ್ರಧಾನಮಂತ್ರಿಗಳ ಸ್ವಚ್ಛ ಭಾರತದಕರೆಗೆ ಕೈ ಜೋಡಿಸಿ ಸಮಾಜವನ್ನು ಒಟ್ಟುಗೂಡಿಸಿ ಮಂಗಳೂರು ಭಾಗದಲ್ಲಿ ಸ್ವಚ್ಛ ಮಂಗಳೂರು ಅಭಿಯಾನವನ್ನು ನಡೆಸಿದ ರೀತಿಎಲ್ಲರಿಗೂ ಮಾದರಿ. ಮಂಗಳೂರು ರಾಮಕೃಷ್ಣ ಮಠದ ಸ್ವಚ್ಛ ಭಾರತಕಾರ್ಯಇನ್ನೂ ಮುಂದುವರಿಯಲಿ. ಮಂಗಳೂರಿನ ಎಲ್ಲ ನಾಗರಿಕರು ಈ ಕಾರ್ಯದಲ್ಲಿಕೈಜೋಡಿಡುತ್ತಾರೆ ಎಂಬ ಭರವಸೆ ನನಗಿದೆ. ಓರ್ವ ಸ್ವಯಂಸೇವಕನಾಗಿ ಹಾಗೂ ಆಶ್ರಮದ ಭಕ್ತನಾಗಿ ನಾನು ಆಶ್ರಮದಜೊತೆಗಿರುತ್ತೇನೆ ಎಂದರು.
ಭಾರತೀಯ ಸೇನೆಯ ನಿವೃತ್ತ ಯೋಧ ಕ್ಯಾ. ಗಣೇಶ್ ಕಾರ್ಣಿಕ್ ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಭಾಗವಹಿಸಿದ್ದರು.
ಅಮೃತ ಭವನ ಲೋಕಾರ್ಪಣೆ
ಸುತ್ತಮುತ್ತಲಿನ ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿರುವ ರಾಮಕೃಷ್ಣ ಮಿಷನ್ ವಿವೇಕಾನಂದ ತರಬೇತಿ ಕೇಂದ್ರದ ನೂತನ ತರಗತಿ ಹಾಗೂ ಅಮೃತ ಭವನ ಸಭಾಂಗಣವನ್ನು ಒಳಗೊಂಡ ಕಟ್ಟಡದ ಲೋಕಾರ್ಪಣೆಯನ್ನು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ಉಪಾಧ್ಯಕ್ಷ ಸ್ವಾಮಿ ಸುಹಿತಾನಂದಜಿ ಮಹಾರಾಜ್ ಅವರು ನೆರವೇರಿಸಿದರು.
ಮಂಗಳೂರು ರಾಮಕೃಷ್ಣ ಮಿಷನ್ನ ಅಮೃತ ವರ್ಷದ ಹಿನ್ನೆಲೆಯಲ್ಲಿ ವರ್ಷಪೂರ್ತಿ ನಡೆಯುವ ಕಾರ್ಯಕ್ರಮಗಳಿಗೆ ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರು ಹಾಗೂ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್, ಬೇಲೂರು ಮಠ ಇದರ ವಿಶ್ವಸ್ಥರಾದ ಸ್ವಾಮಿ ಮುಕ್ತಿದಾನಂದಜಿ ಚಾಲನೆ ನೀಡಿದರು. ರಾಮಕೃಷ್ಣ ಮಿಷನ್ ಮಂಗಳೂರಿನ ಪತ್ರಿಕೆಯನ್ನು ಸ್ವಾಮಿ ಸುಹಿತಾನಂದಜಿ ಮಹಾರಾಜ್ ಅನಾವರಣ ಗೊಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ನ ನೂತನ ಜಾಲತಾಣಕ್ಕೆ ಸಂಸದ ಕ್ಯಾ. ಬ್ರಿಜೇಶ್ಚೌಟ ಅನಾವರಣಗೊಳಿಸಿದರು. ಮಂಗಳೂರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ನ ಸಾಕ್ಷ್ಯಚಿತ್ರವನ್ನು ಕ್ಯಾ. ಗಣೇಶ್ ಕಾರ್ಣಿಕ್ ಬಿಡುಗಡೆಗೊಳಿಸಿದರು.