ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Sunday, September 21, 2025
ಮಂಗಳೂರು: ಅನೇಕ ಸಮಯಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಮಂಗಳೂರು ಪೂರ್ವ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ವಳಪೆಲ್ ಹೌಸ್‌ನ ನಿವಾಸಿ ಹನೀಫ್ ಯಾನೆ ಅಬ್ದುಲ್ ಹನೀಫ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ೬ನೇ ಜೆಎಂಎಫ್‌ಸಿ ನ್ಯಾಯಾಲಯದ ಸಿಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿದ್ದರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ೪ ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.