ತಾಂತ್ರಿಕ ಕೌಶಲ್ಯದೊಂದಿಗೆ ಸ್ಮಾರ್ಟ್ ಸ್ಕಿಲ್ ಅಗತ್ಯ: ಮಂಜುನಾಥ್ ಭಂಡಾರಿ
ಅವರು ಇಂದು ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ 2024-25ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ನೃತ್ಯ ವಿದುಷಿ ದಿಕ್ಷಾ ವಿ. ಅವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಗೌರರ ಪುರಸ್ಕಾರ ನೀಡಿ ಮಾತನಾಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಪ್ರತಿಭಾನ್ವಿಕ ಮಕ್ಕಳನ್ನು ಗುರುತಿಸಿ ಪ್ರೋತ್ಸಹಿಸುವ ಕೆಲಸ ಮಾಡುತ್ತಿರುವುದು ಸಂತೋಷದ ವಿಚಾರ. ಪ್ರತಿಯೊಬ್ಬ ವಿದ್ಯಾರ್ಥಿಯೂ ಓದುವ ಕೌಶಲ್ಯ, ಅನಲಿಟಿಕಲ್ ಕೌಶಲ್ಯ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು. ಇವುಗಳು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜೀವನಕ್ಕೆ ಕಷ್ಟವಾಗುತ್ತದೆ ಎಂದ ಅವರು ನಾವು ಯಾವಾಗಲೂ ಅಂತರ್‌ರಾಷ್ಟ್ರ, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ನಾವು ಪ್ರೇರಣೆಯಾಗಿ ಇಟ್ಟುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ನೃತ್ಯ ವಿದುಷಿ ದಿಕ್ಷಾ ವಿ. ಅವರನನು ಗೌರವಿಸಲಾಯಿತು. ಯೋಗ ಪ್ರದರ್ಶನ ನೀಡಿದ ತನುಶ್ರೀ ಪಿತ್ರೋಡಿ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ನೃತ್ಯ ವಿದುಷಿ ದಿಕ್ಷಾ ವಿ. ಹಾಗೂ ಇಬ್ಬರು ವಿದ್ಯಾರ್ಥಿಗಳು ಮಾತನಾಡಿ, ಧನ್ಯವಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಕಳೆದ ೧೭ ವರ್ಷದಿಂದ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಇಲ್ಲಿ ವಿದ್ಯಾರ್ಥಿವೇತನ ಪಡೆದ ಹಾಗೂ ಗೌರವಿಸಲ್ಪಟ್ಟ ವಿದ್ಯಾರ್ಥಿಗಳು ಮುಂದೆ ತಾವು ಶಿಕ್ಷಣ ಮುಗಿಸಿ, ಕೆಲಸಕ್ಕೆ ಹೋದ ನಂತರ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಹೇಳಿದರು.ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಮುಖ್ಯಕಾರ್ಯನಿರ್ವಾಣಾಧಿಕಾರಿ ಗೋಪಾಲಕೃಷ್ಣ ಭಟ್, ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.
ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಶಶಿಕುಮಾರ್ ರೈ ಬೊಳ್ಳಿಯೊಟ್ಟು ನಿರೂಪಿಸಿದರು.
