‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಮಂಗಳೂರು: ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2024ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದೆ.

ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ ೨೦೨೪ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ್ 30ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು-575001 (ದೂ.ಸಂ. 9845054191, 0824-2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article