ಮಾದಕ ವಸ್ತು ಸಾಗಾಟ ಮತ್ತು ಮಾರಾಟ: ಹೊರ ರಾಜ್ಯದ ಇಬ್ಬರು ಆರೋಪಿಗಳ ಬಂಧನ

ಮಾದಕ ವಸ್ತು ಸಾಗಾಟ ಮತ್ತು ಮಾರಾಟ: ಹೊರ ರಾಜ್ಯದ ಇಬ್ಬರು ಆರೋಪಿಗಳ ಬಂಧನ


ಮಂಗಳೂರು: ಮಂಗಳೂರು ನಗರದಲ್ಲಿ ಸಾಗಾಟ ಮತ್ತು ಮಾರಟ ಮಾಡುತ್ತಿದ್ದ ಇಬ್ಬರು ಹೊರರಾಜ್ಯದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರ್ ರಾಜ್ಯದ ಹರ್ಷ ಕುಮಾರ್ (22)  ಮತ್ತು ಅಮರ್ ಕುಮಾರ (28) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರವರಿಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ. ಅವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ಜ್ಞಾನಶೇಖರ  ಅವರು ತಮ್ಮ ಸಿಬ್ಬಂದಿಗಳ ಜೊತೆ ಇಂದು ಹರ್ಷ ಕುಮಾರ್ ಎಂಬಾತನಿಂದ 1 ಕೆ.ಜಿ. 230 ಗ್ರಾಂ. ಮತ್ತು  ಅಮರ್ ಕುಮಾರ್ ಎಂಬಾತನಿಂದ  80 ಗ್ರಾಂ. ಗಾಂಜಾ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳಿಂದ ಸುಮಾರು 75,000 ರೂ. ಮೌಲ್ಯದ ಮಾದಕ ವಸ್ತು ಹಾಗೂ 2 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಪಣಂಬೂರು ಪೊಲೀಸ್ ಠಾಣಾ ಅ.ಕ್ರ ನಂಬ್ರ 75/2025 ಕಲಂ: 8(c), 20(b)(ii)(B) ಎನ್ ಡಿಪಿಎಸ್ ಕಾಯ್ದೆ  ರಂತೆ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article