ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ


ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣ ದುರಸ್ತಿಗೊಳಿಸಬೇಕೆಂದು ಆಗ್ರಹಿಸಿ ಕರುನಾಡ ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್  ವತಿಯಿಂದ ಶನಿವಾರ ಬೈಕಂಪಾಡಿಯಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. 

ಕೂಳೂರು ಗೋಲ್ಡ್ ಫಿಂಚ್ ಗ್ರೌಂಡ್ ಬಳಿ ಸಿಟಿ ಬಸ್‌ಗಳು ಹೆದ್ದಾರಿಯಲ್ಲೇ ನಿಲ್ಲಿಸಿಕೊಂಡು ಪ್ರಯಾಣಿಕರನ್ನು ಅವಸರಾವಸರವಾಗಿ ಕರೆದು ಬಸ್ ಹತ್ತಿಸಿಕೊಳ್ಳುವುದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. 

ಸದ್ಯ ಈಗಾಗಲೇ ನಿರ್ಮಾಣ ಮಾಡಲಾಗಿರುವ ರಾಷ್ಟ್ರೀಯ ಹೆದ್ದಾರಿ ಸಹಿತ ಸರ್ವಿಸ್ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಎಲ್ಲೆಡೆ ದುರಸ್ತಿಗೊಳಿಸಬೇಕು. ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಬೇಕು. ಆಯಕಟ್ಟಿನ ಪ್ರದೇಶಗಳಲ್ಲಿ ಸ್ಕೈವಾಕ್ ಗಳನ್ನು ನಿರ್ಮಾಣ ಮಾಡಬೇಕು. ನಂತೂರು-ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣ ಡಾಂಬರೀಕರಣಗೊಳಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. 

ಕರುನಾಡ ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ರಂಜಿತ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ದ.ಕ. ಸಂಚಾಲಕ ಸಂಶುದ್ದೀನ್ ಮೊದಲಾದವರು ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಹೆದ್ದಾರಿಯ ನಿರ್ಲಕ್ಣ್ಯವನ್ನು ಖಂಡಿಸಿದರು. 

ಈ ವೇಳೆ ಇರ್ಷಾದ್, ಬಿಪಿಸಿಎಲ್ ಘಟಕದ ಚಾಲಕರು, ಐಒಸಿಎಲ್ ಘಟಕದ ಚಾಲಕರು, ಬೈಕಂಪಾಡಿ ಆಟೊ ಚಾಲಕ ಮಾಲಕರ ಸಂಘದ ಸದಸ್ಯರು ಮೊದಲಾದವರು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article