ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಗ್ರಸ್ಥಾನದಲ್ಲಿದೆ: ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು

ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಗ್ರಸ್ಥಾನದಲ್ಲಿದೆ: ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು


ಮಂಗಳೂರು: ದೇಶದ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಗ್ರಸ್ಥಾನದಲ್ಲಿದೆ. ಕೋರ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕ್‌ನಂತಹ ಉತ್ಕೃಷ್ಟ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್‌ನಲ್ಲಿ ಅಳವಡಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಮರ್ಥ ಅಧ್ಯಕ್ಷತೆಯಲ್ಲಿ ಗಣನೀಯ ಪ್ರಗತಿಯನ್ನು ಕಂಡು ದೇಶಕ್ಕೆ ಮಾದರಿಯಾಗಿದೆ ಎಂದು ನಬಾರ್ಡ್ ಸಿಜಿಎಂ. ಡಾ. ಸುರೇಂದ್ರ ಬಾಬು ಹೇಳಿದ್ದಾರೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿದ ಅವರು ಬ್ಯಾಂಕಿನ ಎಲ್ಲಾ ವಿಭಾಗಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ದೇಶದ ಡಿಸಿಸಿ ಬ್ಯಾಂಕ್‌ಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಗ್ರಮಾನ್ಯ ಬ್ಯಾಂಕ್ ಆಗಿದೆ. ಸಂಪೂರ್ಣ ಗಣಕೀಕೃತವಾಗಿರುವ ತನ್ನ 113 ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಕೃಷಿ ಸಾಲ ವಿತರಣೆ ಹಾಗೂ ಮರುಪಾವತಿಯಲ್ಲಿ ಸಹಕಾರಿ ವ್ಯವಸ್ಥೆಗೆ ಮಾದರಿಯಾಗಿದ್ದು ಮಾತ್ರವಲ್ಲ ನಬಾರ್ಡ್ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲೂ ಎಸ್‌ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿರುವ ಬಗ್ಗೆಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು ಅವರನ್ನು ಸ್ವಾಗತಿಸಿ, ಬ್ಯಾಂಕ್ ನಡೆದು ಬಂದ ಪ್ರಗತಿಯ ಪರಿಚಯ ಮಾಡಿಕೊಟ್ಟರು. ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 35000ಕ್ಕೂ ಹೆಚ್ಚು ನವೋದಯ ಸಂಘಗಳು ರಚನೆ ಮಾಡಿದ್ದು, ಸುಮಾರು 3.50 ಲಕ್ಷಕ್ಕೂ ಹೆಚ್ಚು ಮಂದಿ ನವೋದಯ ಸ್ವಸಹಾಯ ಸಂಘದಲ್ಲಿದ್ದಾರೆ ಎಂದು ವಿವರಿಸಿದರು. 

ಈ ಸಂದರ್ಭದಲ್ಲಿ ಬ್ಯಾಂಕಿಗೆ ಮೊದಲ ಬಾರಿ ಆಗಮಿಸಿದ ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು ಅವರನ್ನು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತ, ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ನಿರ್ದೇಶಕರುಗಳಾದ ಎಂ. ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article