ದ.ಕ. ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಅಯ್ಕೆ
Friday, September 12, 2025
ಮಂಗಳೂರು: ಸೆ.10 ರಂದು ಸಂತ ಅಲೋಶಿಯಸ್ ಪ.ಪೂ. ಕಾಲೇಜು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿದ್ದಾರೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೇಹಿಕಾ 2 ಬೆಳ್ಳಿ ಪದಕ ಹಾಗೂ 1 ಕಂಚಿನ ಪದಕ ಪಡೆದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅದಿತ್ 1 ಕಂಚಿನ ಪದಕ ಪಡೆದಿರುತ್ತಾರೆ ಹಾಗೂ ಕಾಲೇಜು ಬಾಲಕರ ತಂಡ 4*100 ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.