ಖಾಸಗಿ ಬಸ್‌ಗಳಲ್ಲಿ ಬಾಗಿಲು ಕಡ್ಡಾಯ: ರಾಮಲಿಂಗಾ ರೆಡ್ಡಿ
ಜಿಲ್ಲೆಗೂ ಇ ಬಸ್:
ನಗರದ ಮುಡಿಪುವಿನಲ್ಲಿರುವ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ವೀಕ್ಷಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇ ಬಸ್‌ಗಳಿಗೆ ಈಗಾಗಲೆ ಬೇಡಿಕೆ ಸಲ್ಲಿಸಿದ್ದು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲಿರುವ ಬಸ್‌ಗಳ ಖರೀದಿಗಾಗಿ ಟೆಂಡರ್ ಕರೆಯಬೇಕಾಗಿದೆ. ಇದಕ್ಕೆ ಕನಿಷ್ಟ ಆರು ತಿಂಗಳ ಸಮಯ ಬೇಕಾಗಬಹದು. ಕೇಂದ್ರ ಬಸ್‌ಗಳನ್ನು ಒದಗಿಸಿದರೆ ಮಂಗಳೂರಿಗೂ ಹಂಚಲಾಗುವುದು ಎಂದು ತಿಳಿಸಿದರು.
ಬಾಗಿಲು ಇಲ್ಲದ ಬಸ್‌ಗಳಿಗೆ ಎಫ್‌ಸಿ ಇಲ್ಲ:
ಇನ್ನು ಬಾಗಿಲುಗಳಿಲ್ಲದೆ ರಸ್ತೆಗೆ ಇಳಿಯುವ ಬಸ್‌ಗಳಿಗೆ ಯಾವುದೇ ಕಾರಣಕ್ಕೂ ಎಫ್‌ಸಿ ನೀಡಬೇಡಿ ಎಂದು ಸೂಚಿಸಿದ ಅವರು ತರಬೇತಿ ಕೇಂದ್ರದಲ್ಲಿ ಪ್ರಾಯೋಗಿಕ ತರಬೇತಿಗೆ ಸೌಲಭ್ಯ ಕಲ್ಪಿಸಬೇಕೆಂಬ ಬೇಡಿಕೆ ಇದೆ. ಇದನ್ನು ಪರಿಗಣಿಸಿ, ಅಗತ್ಯವಿರುವವರಿಗೆ ತರಬೇತಿ ಮತ್ತು ವಸತಿ ವ್ಯವಸ್ಥೆ ಮಾಡಲಾಗುವುದು. ತರಬೇತಿಗಾಗಿ ಕೆಎಸ್‌ಆರ್‌ಟಿಸಿಯಿಂದ ಒಂದು ಬಸ್ ಪಡೆಯಲಾಗುವುದು, ಆದರೆ ಟ್ರಕ್ ಖರೀದಿಗೆ ಆರ್ಥಿಕ ಇಲಾಖೆಯ ಅನುಮತಿ ಬೇಕಾಗುತ್ತದೆ ಎಂದರು.
ದರ ಏರಿಕೆ ವಿರುದ್ಧ ಕ್ರಮ:
ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್‌ಗಳ ಹೆಚ್ಚುವರಿ ದರ ವಸೂಲಿಯನ್ನು ತಡೆಯಲು 2,300 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಸ್ತೆಗೆ ಇಳಿಸಲಾಗುವುದು. ಖಾಸಗಿ ಬಸ್‌ಗಳು ಹಬ್ಬದ ಸಂದರ್ಭದಲ್ಲಿ ಟಿಕೆಟ್ ದರ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಗಣೇಶ ಹಬ್ಬದ ಸಂದರ್ಭದಲ್ಲಿ 1,200 ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.