ಕೊಲ್ಲಮೊಗ್ರು ಪಂಚಾಯತ್‌ನಲ್ಲಿ ಕಳ್ಳರು ಯಾರು?: ಅಂಗಡಿ ಮುಂಗಟ್ಟು ಬಂದ್: ಗ್ರಾಮಸ್ಥರಿಂದ ಮುತ್ತಿಗೆ
ವಾಟ್ಸ್ಯಾಪ್‌ನಲ್ಲಿ ಪಂಚಾಯತ್ ವಿರುದ್ಧ ಬರೆದಿದ್ದಕ್ಕಾಗಿ ಇಂಟರ್ ನೆಟ್ ಕೇಬಲ್ ಕತ್ತರಿಸಿ ಊರಿಗೆ ತೊಂದರೆಗಳನ್ನು ಕೊಡಲಾಗಿದೆ ಎಂದು ಆರೋಪಿಸಿದರು.
ಪಂಚಾಯತ್ ಉಪಾಧ್ಯಕ್ಷ ಮಾಧವ್ ಚಾಂತಲ ಮತ್ತು ಗುಮಾಸ್ತ ಸಂತೋಷ್ ಸ್ಥಳಕ್ಕೆ ಬರಲೇಬೇಕು ಎಂದು ಪಟ್ಟು ಹಿಡಿದರು. ಅವರಿಗೆ ಪಂಚಾಯತ್ ಅಧ್ಯಕ್ಷೆ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಇದೇ ವೇಳೆ ಪಂಚಾಯತ್ ನಿಂದ ಗ್ರಾಮಸ್ಥರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಇಬ್ಬರು ಸದಸ್ಯರು ರಾಜೀನಾಮೆ ನೀಡಿದರು.
ಪಂಚಾಯತ್‌ನಲ್ಲಿ ಅವ್ಯವಹಾರ ಆದರೆ ಅದಕ್ಕೆ ಅಧ್ಯಕ್ಷರು ಹಾಗೂ ಪಿಡಿಓ ಜವಾಬ್ದಾರಿ ಆಗುತ್ತಾರೆ. ಹಾಗಾಗಿ ದೂರು ನೀಡುವಂತೆ ಒತ್ತಡ ಹೇರಿದರು. ಗ್ರಾಮಸ್ಥರ ಒತ್ತಾಯ ಕ್ಕೆ ಮಣಿದ ಪಿಡಿಓ ಗ್ರಾಮಸ್ಥರ ಮುಂದೆಯೇ ದೂರು ಬರೆದು ಅದನ್ನು ಗ್ರಾಮಸ್ಥರು ಓದಿ ಸರಿಪಡಿಸಿದರು.
ನಡುರಸ್ತೆಯಲ್ಲೇ ಸಿಇಓ ವಾಹನಕ್ಕೆ ತಡೆ!:
ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಗ್ರಾಮಸ್ಥರು ಹಾಗೂ ಪಿಡಿಓ ವಾಪಸ್ ಬರುತ್ತಿದ್ದಾಗ ಪಂಚಾಯತ್ ಸಿಇಒ ಬಂದಿದ್ದು ಅವರನ್ನು ನಡುರಸ್ತೆಯಲ್ಲೇ ತಡೆದರು. ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಆರೋಪ ಬಂದಾಗ ಕಾನೂನು ಪ್ರಕಾರ ನಡೆದುಕೊಳ್ಳಬೇಕು, ಗ್ರಾಮಸ್ಥರು ಬೀದಿಗೆ ಬರುವಂತೆ ಮಾಡಬಾರದು ಎಂದರು. ಅಲ್ಲದೆ ಪ್ರಕರಣದ ಬಗ್ಗೆ ತನಿಖೆ ನಡೆಸುವ ಬಗ್ಗೆಯೂ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಗ್ರಾಮಸ್ಥರಾದ ಉದಯ ಶಿವಾಲ ಸುಧಾಮಣಿ, ಹರಿಪ್ರಸಾದ್, ಗಿರೀಶ ತಂಬಿನಡ್ಕ,ಸತೀಶ ಚಾಳೆಪ್ಪಾಡಿ, ದಿನೇಶ ಮಡ್ತಿಲ, ಶೇಖರ ಅಂಬೆಕಲ್ಲು, ಸತೀಶ್ ಟಿ.ಎನ್, ಮಣಿಕಂಠ ಕೊಳಗೆ, ಸಚಿತ್ ಶಿವಾಲ, ನಂದ ಬಿಳಿಮಲೆ, ವೀಣಾನಂದ ಬಿಳಿಮಲೆ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.



