
ಸಿಎಂ ಸಿದ್ದರಾಮಯ್ಯ ಅವರಿಗೆ ಗಲಭೆ ಉಂಟುಮಾಡುವವರು ಶಾಂತಿದೂತರಂತೆ ಕಂಡು ಬರುತ್ತಿದ್ದಾರೆ: ಶಾಸಕ ಭರತ್ ಶೆಟ್ಟಿ ಆಕ್ರೋಶ
ಗಲಾಟೆ ಆಗಬಾರದು ಎಂದು ಹಿಂದೂಗಳ ಹಬ್ಬಗಳಿಗೆ ಮೆರವಣಿಗೆ ಧಾರ್ಮಿಕ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆಯನ್ನ ಬಳಸಿಕೊಂಡು ಅಂಕುಶ ಹಾಕಿದ್ದಾರೆ. ಕಾನೂನು ಪಾಲಿಸಿಕೊಂಡು ಹಬ್ಬ ಆಚರಿಸಿದರೆ ಮುಖ್ಯಮಂತ್ರಿಗಳ ಶಾಂತಿದೂತರು ಕಾನೂನು ಕೈಗೆತ್ತಿಕೊಂಡು ಗಲಭೆ ಎಬ್ಬಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ. ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಸರ್ಕಾರದ ಈ ಪಕ್ಷಪಾತ ಹಾಗೂ ಮೃದುಧೋರಣೆ ರಾಜ್ಯದಲ್ಲಿ ಅರಾಜಕತೆ, ಜನತೆಯೇ ಕಾನೂನು ಕೈಗೆತ್ತಿ ಕೊಳ್ಳಲು ಕಾರಣವಾಗುತ್ತಿದೆ.
ಮತಾಂಧ ದುಷ್ಕರ್ಮಿಗಳ ಮೇಲೆ ವೋಟ್ ಬ್ಯಾಂಕ್, ಅಲ್ಪಸಂಖ್ಯಾತರ ಓಲೈಕೆಯಿಂದ ಕಾನೂನು ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಜಿಹಾದಿಗಳ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಮಹಿಳೆಯರು ಮಕ್ಕಳು ಎನ್ನದೆ ಶಾಂತಿಯುತವಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿದ್ದಾರೆ.
ಹಿಂದುಗಳ ತಾಳ್ಮೆಗೂ ಮಿತಿ ಇದೆ. ಸರಕಾರ ಹಾಗೂ ಪೊಲೀಸ್ ವ್ಯವಸ್ಥೆ ನಮ್ಮ ರಕ್ಷಣೆಗೆ ಕ್ರಮ ಕೈಗೊಳ್ಳದಿದ್ದರೆ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳುದು ಗೊತ್ತಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಪ್ರಕಟಣೆಯಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.