ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ


ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಶಿಕ್ಷಕ ಸುಧಾಕರ್ ರಾವ್ ಪೇಜಾವರ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರ್ಥಪೂರ್ಣವಾದ ಸಮಾಜಕ್ಕೆ ಬೇಕಾದ ಒಂದು ಶಕ್ತಿಯುತವಾದ ಪ್ರಜಾ ಸಂಪತ್ತನ್ನು ನೀಡುವವರು ಶಿಕ್ಷಕರು. ಅತಿಯಾದ ವಾತ್ಸಲ್ಯವನ್ನು ತೋರುವ ಅಮ್ಮ ಒಂದೆಡೆಯಾದರೆ, ಇನ್ನೊಂದೆಡೆ ಮಿತಿಯಾದ ವಾತ್ಸಲ್ಯವನ್ನು ತೋರಿ ಮಕ್ಕಳನ್ನು ತಿದ್ದಿ ತೀಡುವ ತಾಯಿ ಶಿಕ್ಷಕಿ. ಇಂದು ಶಿಕ್ಷಣ ವ್ಯವಸ್ಥೆ ಬದಲಾಗಿರಬಹುದು, ಆದರೆ ಹೃದಯದ ಭಾವನೆ ಬದಲಾವಣೆ ಆಗಬಾರದು. ಗುರು ಮತ್ತು ಶಿಷ್ಯರ ನಡುವಿನ ಬಾಂಧವ್ಯದ ಬೆಸುಗೆ ಇನ್ನಷ್ಟು ಗಟ್ಟಿಯಾಗಬೇಕು ಎಂದರು.

ಶಕ್ತಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಮಹತ್ವದ ಬಗ್ಗೆ ಕನ್ನಡ, ಆಂಗ್ಲ, ಹಿಂದಿ ಹಾಗೂ ಸಂಸ್ಕತ ಭಾಷೆ?ಯಲ್ಲಿ ವ್ಯಕ್ತಪಡಿಸಿದರು.

ನಿವೃತ್ತ ಶಿಕ್ಷಕ ಸುಧಾಕರ್ ರಾವ್ ಪೇಜಾವರ ಅವರನ್ನು ಸನ್ಮಾನಿಸಲಾಯಿತು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ಬಬಿತಾ ಸೂರಜ್ ಸನ್ಮಾನ ಪತ್ರ ವಾಚಿಸಿದರು. 

ವೇದಿಕೆಯಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಡಾ ಕೆ.ಸಿ. ನಾಯ್ಕ್, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ಬಬಿತಾ ಸೂರಜ್ ಉಪಸ್ಥಿತರಿದ್ದರು. 

ಶಕ್ತಿ ವಸತಿ ಶಾಲೆಯ ಶಿಕ್ಷಕ ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು.

 

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article