ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ
Thursday, September 18, 2025
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್, ರೋವರ್-ರೇಂಜರ್‍ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ಹಾಗೂ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಅರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಇಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಿಂಚನ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನದ ಮಹತ್ವ ಮತ್ತು ಪ್ರಯೋಜನಗಳ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ಮಾತನಾಡಿ, ರಕ್ತದಾನದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅವರಿಗೆ ಸಾಮಾಜಿಕ ಜನಬ್ದಾರಿಯ ಅರಿವಾಗುತ್ತದೆ ಎಂದು ಹೇಳಿದರು.
ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಹಾಯಕರು, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರೋವರ್-ರೇಂಜರ್‍ಸ್, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರು ಮತ್ತು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಹಾಗೂ ಬೋಧಕರು ಸೇರಿ ಒಟ್ಟು 126 ಮಂದಿ ರಕ್ತದಾನಗೈದರು. ಸುಮಾರು 655 ವಿದ್ಯಾರ್ಥಿಗಳು ಆರೋಗ್ಯ ತಪಾಸಣಾ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
ಮೈತ್ರಿ ಬಿ. ಸ್ವಾಗತಿಸಿ, ಸಿಂಚನಾ ವಂದಿಸಿದರು. ಸಾರ ಕಾರ್ಯಕ್ರಮವನ್ನು ನಿರೂಪಿಸಿದರು.