ಮಂಗಳೂರು ದಸರಾ ಪ್ರಯುಕ್ತ ಸಂಚಾರದಲ್ಲಿ ಬದಲಾವಣೆ
ಅ.2 ರಂದು ಮಧ್ಯಾಹ್ನ 2 ಗಂಟೆಯಿಂದ ನಗರದ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಂಚಾರಕ್ಕೆ ಅಡಚಣೆ ಉಂಟಾಗುವುದಲ್ಲದೇ, ಸಾರ್ವಜನಿಕರಿಗೆ ಸುರಕ್ಷತೆಗಾಗಿ ಸಾರ್ವಜನಿಕರು ಸದ್ರಿ ಮಾರ್ಗವನ್ನು ಉಪಯೋಗಿಸದೇ ಪರ್ಯಾಯ ಮಾರ್ಗಗಳನ್ನು ಅನುಸರಿಸಲು ಮತ್ತು ಮೆರವಣಿಗೆ ಸಾಗುವ ಸದರಿ ರಸ್ತೆಯ ಬದಿಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆ ತಿಳಿಸಲಾಗಿದೆ.
ಕುದ್ರೋಳಿ ದಸರಾ ಮೆರವಣಿಗೆಯ ಮಾರ್ಗಗಳ ವಿವರ:
ಕುದ್ರೋಳಿ ದೇವಸ್ಥಾನದ ದ್ವಾರ-ದುರ್ಗಾಮಹಲ್ ಜಂಕ್ಷನ್-ಮಣ್ಣಗುಡ್ಡೆ ಜಂಕ್ಷನ್-ನಾರಾಯಣಗುರು ವೃತ್ತ-ಲಾಲ್‌ಭಾಗ್-ಬಳ್ಳಾಲ್ ಭಾಗ್-ಕೊಡಿಯಲ್ ಗುತ್ತು ಜಂಕ್ಷನ್-ಬಿ.ಜಿ.ಸ್ಕೂಲ್ ಜಂಕ್ಷನ್-ಪಿ.ವಿ.ಎಸ್.ಜಂಕ್ಷನ್-ನವಭಾರತ್ ವೃತ್ತ-ಕೆಎಸ್‌ಆರ್ ರಸ್ತೆ-ಹಂಪನ್ ಕಟ್ಟೆ-ಕೆ.ಬಿ.ಕಟ್ಟೆ-ಫೆಲೀಕ್ಸ್ ಪೈ ರಸ್ತೆ-ಕಾರ್ ಸ್ಟ್ರೀಟ್-ಬಾಲಾಜಿ ಜಂಕ್ಷನ್-ನ್ಯೂಚಿತ್ರಾ ಜಂಕ್ಷನ್-ಅಳಕೆ ಬ್ರಿಡ್ಜ್-ಕುದ್ರೋಳಿ ದೇವಸ್ಥಾನದ ದ್ವಾರವರೆಗೆ ವಾಹನ ದಟ್ಟಣೆಯಾಗುವ ಸಾದ್ಯೆತೆಗಳು ಇರುವುದರಿಂದ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿದೆ.
ಕುದ್ರೋಳಿ ದಸರಾ ಮೆರವಣಿಗೆಯ ಸಮಯ ವಾಹನ ಸಂಚಾರದ ಮಾರ್ಪಾಡಿನ ವಿವರ:
ಕೊಟ್ಟಾರ ಚೌಕಿ ಜಂಕ್ಷನ್‌ನಿಂದ ಲೇಡಿಹಿಲ್ ಮುಖಾಂತರ ಮಂಗಳೂರು ನಗರಕ್ಕೆ ಬರುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗವಾದ ಕುಂಟಿಕಾನ-ಕೆಪಿಟಿ-ನಂತೂರು ಮುಖೇನ ಮಂಗಳೂರು ನಗರಕ್ಕೆ ಸಂಚರಿಸುವುದು.
ಬಂಟ್ಸ್ ಹಾಸ್ಟೆಲ್‌ನಿಂದ ಪಿವಿಎಸ್ ಮುಖಾಂತರ ಎಂ.ಜಿ. ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಬಂಟ್ಸ್ ಹಾಸ್ಟೆಲ್-ಭಾರತ್ ಬೀಡಿ-ಬಟ್ಟಗುಡ್ಡ-ಕೆಪಿಟಿ ಮುಖೇನ ಅಥವಾ ಬಂಟ್ಸ್ ಹಾಸ್ಟೆಲ್-ಭಾರತ್ ಬೀಡಿ-ಮಲ್ಲಿಕಟ್ಟೆ ಮಾರ್ಗವಾಗಿ ಸಂಚರಿಸುವುದು.
ಕೆ.ಎಸ್.ಆರ್.ಟಿ.ಸಿ ಜಂಕ್ಷನ್‌ನಿಂದ ಲಾಲ್‌ಬಾಗ್ ಕಡೆಗೆ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ ಜಂಕ್ಷನ್-ಕಾಪಿಕಾಡ್-ಕುಂಟಿಕಾನ ಮೂಲಕ ಅಥವಾ ಕೆ.ಎಸ್.ಆರ್.ಟಿ.ಸಿ ಜಂಕ್ಷನ್-ಬಿಜೈ ಬಟ್ಟಗುಡ್ಡ ಮಾರ್ಗವಾಗಿ ಸಂಚರಿಸುವುದು.
ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕೆ.ಎಸ್.ಆರ್.ಟಿ.ಸಿ ಜಂಕ್ಷನ್‌ನಿಂದ-ಕಾಪಿಕಾಡ್-ಕುಂಟಿಕಾನ ಮೂಲಕ ಅಥವಾ ಬಿಜೈ ಬಟ್ಟಗುಡ್ಡ ಮೂಲಕ ಸಂಚರಿಸುವುದು.
ಹಂಪನಕಟ್ಟೆ ಕಡೆಯಿಂದ ಕೆ.ಎಸ್.ಆರ್-ನವಭಾರತ್ ವೃತ್ತದ ಮೂಲಕ ಪಿವಿಎಸ್ ಜಂಕ್ಷನ್ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಹಂಪನಕಟ್ಟೆ-ಎಲ್.ಹೆಚ್.ಹೆಚ್-ಅಂಬೇಡ್ಕರ್ ಜಂಕ್ಷನ್ ಮೂಲಕ ಸಂಚರಿಸುವುದು.
ನ್ಯೂ ಚಿತ್ರಾ ಜಂಕ್ಷನ್‌ನಿಂದ ನವಭಾರತ ಕಡೆಗೆ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವುದು.
ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಮಣ್ಣಗುಡ್ಡೆ ಜಂಕ್ಷನ್-ದುರ್ಗಾಮಹಲ್-ಕುದ್ರೋಳಿ ದೇವಸ್ಥಾನ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವುದು.
ಮಂಗಳೂರು ದಸರಾ ಮೆರವಣಿಗೆ ನೋಡಲು ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಕರಾವಳಿ ಮೈದಾನ, ಅಳಕೆ ಮಾರ್ಕೆಟ್, ಉರ್ವ ಮಾರ್ಕೆಟ್ ಮೈದಾನ, ಉರ್ವ ಕೆನರಾ ಸ್ಕೂಲ್, ಕೆನರಾ ಡೊಂಗರಕೇರಿ ಸ್ಕೂಲ್, ಪೊಂಪೈ ಚರ್ಚ್, ದುರ್ಗಾಮಹಲ್ ಹೊಟೇಲ್, ಕುದ್ರೋಳಿ ನಾರಾಯಣ ಕಾಲೇಜು, ಬಿಇಎಂ ಸ್ಕೂಲ್, ಸರಕಾರಿ ಹೆಣ್ಣುಮಕ್ಕಳ ಪ್ರೌಢ ಶಾಲೆ ಕಾರ್ ಸ್ಟ್ರೀಟ್, ಹೊಟೇಲ್ ವಿಮಲೇಶ್‌ನಲ್ಲಿ ಪಾರ್ಕಿಂಗ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.