ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ನಡುವೆ: ವಿದ್ಯುತ್ ಚಾಲಿತ ಪ್ಯಾಸೆಂಜರ್

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ನಡುವೆ: ವಿದ್ಯುತ್ ಚಾಲಿತ ಪ್ಯಾಸೆಂಜರ್

ಮಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.

ವಿದ್ಯುತ್ ಚಾಲಿತ ಪ್ರಯಾಣಿಕ ರೈಲು ಸಂಚಾರ ಆರಂಭದೊಂದಿಗೆ ಭವಿಷ್ಯದಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರಸ್ ರೈಲು ಓಡಾಟಕ್ಕೆ ಸಹಕಾರಿಯಾಗುವುದನ್ನು ನಿರೀಕ್ಷಿಸಲಾಗಿದೆ. 

ಮಂಗಳೂರು ಸೆಂಟ್ರಲ್ - ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು (ನಂ. 56625/26, 56627/28 56629/30) ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ. 

ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣ ಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್ಚಾಲಿತ ರೈಲುಗಳ ಓಡಾಟ ಆರಂಭ ಗೊಂಡಿದೆ. ಸೆ.೧೧ ರಂದು ವಿದ್ಯುತ್ ಚಾಲಿತ ರೈಲು ಇಂಜಿನ್‌ನ ಪ್ರಾಯೋಗಿಕ ಪರೀಕ್ಷೆ ನಡೆದು ಅಧಿಕೃತ ಆರಂಭಕ್ಕೆ ದಿನ ನಿಗದಿಯಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article