ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓಝೋನ್ ದಿನಾಚರಣೆ
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿ ಡಾ. ಲಕ್ಷ್ಮಿಕಾಂತ್ ಹೆಚ್. ಮಾತನಾಡಿ, ಓಝೋನ್ ಪದರ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವುದರ ಜೊತೆಗೆ ಭೂಮಂಡಲದಲ್ಲಿರುವ ಜೀವ ಸಂಕುಲವನ್ನು ರಕ್ಷಣೆ ಮಾಡುವ ಪದರವಾಗಿ ಕಾರ್ಯ ನಿರ್ವಹಿಸುತ್ತದೆ. ಸೂರ್ಯನ ನೇರಳಾತೀತ ಕಿರಣಗಳು ಭೂಮಿಗೆ ಬೀಳದಂತೆ ತಡೆದು ಮಣ್ಣು, ಸಸ್ಯಕಾಶಿ, ಜೀವರಾಶಿಗಳನ್ನು ಸಂರಕ್ಷಣೆ ಮಾಡುತ್ತದೆ. ಮನುಕುಲವು ಪ್ರಕೃತಿಗೆ ಮಾಡುತ್ತಿರುವ ಹಾನಿಕಾರಕ ಚಟುವಟಿಕೆಗಳಿಂದ ಓಝೋನ್ ಮಹಾಪದರ ನಾಶ ಆಗುತ್ತಿದೆ. ಮನುಷ್ಯ ಬಳಸುತ್ತಿರುವ ರೆಫ್ರಿಜರೇಟರ್, ಹವಾನಿಯಂತ್ರಕಗಳು ಸಾಕಷ್ಟು ಹಾನಿಕಾರಕ ಅನಿಲಗಳನ್ನು ಬಿಡುಗಡೆ ಮಾಡುವುದರಿಂದ ಕೆಟ್ಟ ಪರಿಣಾಮಗಳನ್ನು ಬೀರುತ್ತಿದೆ. ಮನುಷ್ಯ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಂಡು ಪ್ರಕೃತಿಯನ್ನು ಬೆಳೆಸಿಕೊಂಡು ಓಝೋನ್ ಪದರವನ್ನು ಮುಂದಿನ ಪೀಳಿಗೆಗೆ ಉಳಿಸಿ ಸಂರಕ್ಷಣೆ ಮಾಡುವಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.
ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರುಗಳಾದ ವಂದನಾ ಗೌರಿ ಹಾಗೂ ಅಭಿಲಾಷ ಪಿ.ಕೆ. ಉಪಸ್ಥಿತರಿದ್ದರು. ಕೇಂದ್ರದ ಕ್ಯುರೇಟರ್ ಜಗನ್ನಾಥ ನಿರೂಪಿಸಿ, ಶೈಕ್ಷಣಿಕ ಸಹಾಯಕಿ ರಶ್ಮಿ ಸ್ವಾಗತಿಸಿದರು. ಕಮ್ಯೂನಿಟಿ ಮೊಬಿಲೈಸರ್ ಶಿವರಾಮ್ ಎಂ. ವಂದಿಸಿದರು.
