
ತಿಮರೋಡಿ ವಿರುದ್ಧ ಕೋಲಾರ ಜನಪರ ವೇದಿಕೆ ದೂರು
Saturday, September 20, 2025
ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡದ ವಿರುದ್ಧ ಕೋಲಾರ ಜಿಲ್ಲಾ ಜನಪರ ವೇದಿಕೆ ಅಧ್ಯಕ್ಷ ನಾಗರಾಜ್ ಹಾಗೂ ತಂಡ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿ ದೂರು ನೀಡಿದೆ.
ತಿಮರೋಡಿ, ತಂಡದ ವಿರುದ್ಧ ಕೋಕಾ, ಗೂಂಡಾ ಕಾಯ್ದೆ ಮತ್ತು ಗಡಿಪಾರು ಅಡಿಯಲ್ಲಿ ಕೇಸು ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ವಿಠಲ್ ಗೌಡ, ಯು ಟ್ಯೂಬರ್ ಸಮೀರ್, ಜಯಂತ್ ಮತ್ತು ಇನ್ನಿತರರ ವಿರುದ್ಧ ಈ ದೂರು ನೀಡಲಾಗಿದೆ.
ಅವಹೇಳನ ವಿರುದ್ಧ ದೂರು..
ಶವ ಹೂತಿಟ್ಟ ಪ್ರಕರಣದಲ್ಲಿ ಧರ್ಮಸ್ಥಳದ ಮೂವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹಿನ್ನೆಲೆಯಲ್ಲಿ ಗ್ರಾಮಸ್ಥ ಎ.ಸಿ. ಚಂದ್ರ ಎಂಬವರು ಎಸ್‌ಐಟಿಗೆ ದೂರು ನೀಡಿದ್ದಾರೆ.
ಕುಸುಮಾವತಿ, ಪತಿ ಚಂದಪ್ಪನನ್ನು ಸ್ಲೋ ಪಾಯಿಸನ್ ನೀಡಿ ಸಾಯಿಸಿದ್ದಾರೆ ಎಂದು ಹೇಳಿದ್ದಾರೆ ಎನ್ನುವ ವಿಚಾರದ ಬಗ್ಗೆ ದೂರಿನಲ್ಲಿ ತಿಳಿಸಿದ್ದಾರೆ