ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರ

ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರ


ಮಂಗಳೂರು: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನ ಮತ್ತು ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರವು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೆ.25 ರಂದು ರಂದು ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬೃಜೇಶ್ ಚೌಟ ಮಾತನಾಡಿ, ಕಳೆದ 11 ವರುಷಗಳಲ್ಲಿ ಭಾರತ ವಿಶ್ವದ ಪ್ರಭಾವಶಾಲಿ ರಾಷ್ಟ್ರಗಳ ಜತೆಯಲ್ಲಿ ಸರಿಸಮಾನವಾಗಿ ನಿಲ್ಲುವಂತಾಗಲು ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದ ಸಂಕಲ್ಪದಿಂದ ಸಾಧ್ಯವಾಗಿದೆ. ರಕ್ಷಣಾ ಸಾಮಾಗ್ರಿಗಳು, ಯುದ್ಧ ವಿಮಾನಗಳು ಪ್ರಸ್ತುತ ಭಾರತದಲ್ಲಿಯೇ ನಿರ್ಮಾಣವಾಗುತ್ತಿದೆ. ದೇಶದ ಆರ್ಥಿಕತೆ ಸಧೃಡವಾಗಲು ಎಲ್ಲರ ಸಹಭಾಗಿತ್ವ ಅಗತ್ಯವಾಗಿದೆ. ಆತ್ಮನಿರ್ಭರ ಭಾರತ ಅಭಿಯಾನದಲ್ಲಿ ಸಕ್ರೀಯವಾಗಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಂಡಿತ್ ದೀನ್ ದಯಾಳ್ ಅವರು ಏಕಾತ್ಮ ಮಾನವತವಾದ ಸಿದ್ಧಾಂತ ಮೂಲಕ ರಾಷ್ಟ್ರೀಯತೆ, ಸಂಸ್ಕೃತಿ, ಸ್ವದೇಶಿ ಚಿಂತನೆಯ ಸ್ವಾವಲಂಬಿ ಭಾರತ ನಿರ್ಮಾಣದ ಕನಸು ಕಂಡವರು. ಅವರ ಸಿದ್ಧಾಂತದ ಮಾರ್ಗದಲ್ಲಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತದ ಯೋಚನೆ, ಯೋಜನೆ ಮೂಲಕ ಭಾರತವನ್ನು ವಿಶ್ವಗುರು ಆಗುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಪದ್ಮಭೂಷಣ ಪುರಷ್ಕೃತರಾದ ಪ್ರೊ. ಎಸ್.ಎಲ್. ಭೈರಪ್ಪ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನಪ್ರಾರ್ಥನೆ ಸಲ್ಲಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವಿಧಾನಪರಿಷತ್‌ನ ಮಾಜಿ ಸದಸ್ಯ, ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಆತ್ಮನಿರ್ಭರ ಭಾರತ ಅಭಿಯಾನದ ಜಿಲ್ಲಾ ಮತ್ತು ಮಂಡಲ ಮಟ್ಟದ ಕಾರ್ಯಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಮತ್ತು ಪ್ರತಿಜ್ಞಾವಿಧಿಯನ್ನು ಭೋದಿಸಿದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು.

ಅಭಿಯಾನದ ಜಿಲ್ಲಾ ಸಂಚಾಲಕ ಹರೀಶ್ ಕಂಜಿಪಿಲಿ ಪ್ರಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಹ ಸಂಚಾಲಕ ಪ್ರಭಾಕರ ಪ್ರಭು ವಂದಿಸಿದರು. ಸಹ ಸಂಚಾಲಕ ಜೀವನ್ ಕುಮಾರ್ ತೊಕ್ಕೊಟು ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article