ಚಿನ್ನಯ್ಯಗೆ ನ್ಯಾಯಾಂಗ ಬಂಧನ
Saturday, September 6, 2025
ಮಂಗಳೂರು: ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನ 15 ದಿನಗಳ ಎಸ್‌ಐಟಿ ಕಸ್ಟಡಿ ಶನಿವಾರ ಅಂತ್ಯಗೊಂಡಿದೆ. ಚಿನ್ನಯ್ಯನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಿ ನ್ನಯ್ಯನನ್ನು ಶಿವಮೊಗ್ಗದ ಕಾರಾಗೃಹಕ್ಕೆ ಕಳುಹಿಸಲಾಗಿದೆ.