ಕಣ್ಣುಗಳನ್ನು ಮರಣದ ನಂತರ ದಾನ ಮಾಡುವ ಮೂಲಕ ಇತರರಿಗೆ ಬೆಳಕಾಗಬೇಕು: ಡಾ. ಪ್ರೇಮ್ ಬಿ.
ಅವರು ಸೆ.11 ರಿಂದ 12 ರಂದು ನಗರದ ರಥಬೀದಿ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೇಂಜರ್ಸ್ ಘಟಕದ ಸಹಯೋಗದೊಂದಿಗೆ ‘ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ನೇತ್ರದಾನದ ಮಹತ್ವವನ್ನು ಮತ್ತು ಸಂರಕ್ಷಣೆಯ ಬಗ್ಗೆ ಮಾತನಾಡಿದರು.
ಐಕ್ಯೂಎಸಿ ಸಂಯೋಜಕ ದೇವಿ ಪ್ರಸಾದ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುರ್ಗಪ್ಪ ಕಜೆಕರ, ರೋವರ್ ರೇಂಜರ್ಸ್ ಘಟಕದ ಸಂಯೋಜಕಿ ಡಾ. ಅಪರ್ಣ ಆಳ್ವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ಹಾಗೂ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಅಪರ್ಣ ಆಳ್ವ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಸಂಕಲ್ಪ ಮಾಡಿದರು.
ವಿದ್ಯಾರ್ಥಿನಿ ಧನ್ಯ ಪ್ರಾರ್ಥನೆ ನೆರವೇರಿಸಿದರು. ರೆಡ್ಕ್ರಾಸ್ ಘಟಕದ ಸಂಯೋಜಕ ಡಾ. ಅಶೋಕ್ ಸಿ.ಕೆ. ಸ್ವಾಗತಿಸಿ, ಶೋಭಾವತಿ ವಂದಿಸಿದರು. ಐಕ್ಯೂಎಸಿ ಸಹ ಸಂಚಾಲಕಿ ಡಾ. ಜ್ಯೋತಿಪ್ರಿಯಾ ನಿರೂಪಿಸಿದರು.
