ಮೆಸ್ಕಾಂ ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್ ನಾಳೆ ಅಧಿಕಾರ ಸ್ವೀಕಾರ

ಮೆಸ್ಕಾಂ ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್ ನಾಳೆ ಅಧಿಕಾರ ಸ್ವೀಕಾರ


ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ)ಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಹರೀಶ್ ಕುಮಾರ್ ಅವರು ಅ.1 ರಂದು ಬೆಳಗ್ಗೆ 10 ಗಂಟೆಗೆ ಬಿಜೈಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಷ್ಠಾವಂತ ನಾಯಕರಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ ಬಳಿಕ ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಿದ ಹರೀಶ್ ಕುಮಾರ್ ಅವರ ಪಕ್ಷ ಸೇವೆಯನ್ನು ಗುರುತಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಮೆಸ್ಕಾಂ ಅಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿತ್ತು. ಇದನ್ನು ಪರಿಗಣಿಸಿ ರಾಜ್ಯ ಸರಕಾರಕ್ಕೆ ಮೆಸ್ಕಾಂ ಅಧ್ಯಕ್ಷರನ್ನು ನೇಮಕ ಮಾಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article