
ಬಾಲಕಾರ್ಮಿಕರ ಕುರಿತು ಅರಿವು ನೆರವು ಮೂಡಿಸುವುದು ಅಗತ್ಯ: ಜೈಬುನ್ನೀಸಾ
ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಡಾ. ಪಿ ದಯಾನಂದ ಪೈ-ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಸ್ಟ್ರೀಟ್ ಸಹಯೋಗದಲ್ಲಿ ನಡೆದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಸ್ತುತ ತಿದ್ದುಪಡಿ ಕಾಯ್ದೆ 2016ಕ್ಕೆ ಸಂಬಂಧಿಸಿದ ಪ್ರಾವಧಾನ, ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳು, ತಂಬಾಕು ನಿಯಂತ್ರಣ ಕಾಯ್ದೆ-2003 ರ ಬಗ್ಗೆ ಕಾನೂನು ಅರಿವು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಸಹಾಯಕ ಪೋಲಿಸ್ ಆಯುಕ್ತೆ ಗೀತಾ ಕುಲಕರ್ಣಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು, ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಹಾಗೂ ತಂಬಾಕು ನಿಯಂತ್ರಣ ಘಟಕದ ಶೃತಿ ಉಪನ್ಯಾಸಗಳನ್ನು ನೀಡಿದರು. ಹಿರಿಯ ಕಾರ್ಮಿಕ ನಿರೀಕ್ಷಕಿ ಮೇರಿ ಪಿ ಡಯಾಸ್, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ನಿತಿನ್ ಎ ಚೊಲ್ವೇಕರ್ ಉಪಸ್ಥಿತರಿದ್ದರು.